ಕೋವಿಡ್-19: ವೈದ್ಯರು, ಫಾರ್ಮಾ ಕಂಪನಿಗಳೊಂದಿಗೆ ಪ್ರಧಾನಿ ಸಂವಾದ
2 ನೇ ಅಲೆಯಲ್ಲಿ ಕೋವಿಡ್-19 ಸೋಂಕು ದೇಶಾದ್ಯಂತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಫಾರ್ಮಾ ಕಂಪನಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.
ನವದೆಹಲಿ: 2 ನೇ ಅಲೆಯಲ್ಲಿ ಕೋವಿಡ್-19 ಸೋಂಕು ದೇಶಾದ್ಯಂತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಫಾರ್ಮಾ ಕಂಪನಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.
ಸಂಜೆ 4.30 ಕ್ಕೆ ದೇಶಾದ್ಯಂತ ಮುಂಚೂಣಿಯಲ್ಲಿರುವ ವೈದ್ಯರೊಂದಿಗೆ ಮೋದಿ ಚರ್ಚೆ ನಡೆಸಲಿದ್ದಾರೆ. ಈ ಬಳಿಕ ಸಂಜೆ 6 ಕ್ಕೆ ಫಾರ್ಮಾ ಸಂಸ್ಥೆಗಳೊಂದಿಗೆ ಕೊರೋನಾ ಪರಿಸ್ಥಿತಿಯ ಬಗ್ಗೆ ಸಂವಾದ ನಡೆಸಲಿದ್ದಾರೆ. ಏ.19 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ 11:30 ರಿಂದ ಮಹತ್ವದ ಸಭೆಗಳನ್ನು ನಡೆಸಿದರು.
ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆತಂಕಕಾರಿ ಪರಿಸ್ಥಿತಿಯನ್ನು ನಿಭಾಯಿಸುವುದರ ಸಂಬಂಧ ಪ್ರಧಾನಿ ಮೋದಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.