ದೇಶ

ಕೋವಿಡ್-19: ತೆಲಂಗಾಣದಲ್ಲಿ ಇಂದಿನಿಂದ ಏಪ್ರಿಲ್ 30 ರವರೆಗೆ ನೈಟ್ ಕರ್ಫ್ಯೂ ಜಾರಿ

Lingaraj Badiger

ಹೈದರಾಬಾದ್: ತೆಲಂಗಾಣದಲ್ಲಿ ಕೊರೋನಾ ವೈರಸ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಸರ್ಕಾರ ಮಂಗಳವಾರ ನಿರ್ಧರಿಸಿದ್ದು, ಇದು ಏಪ್ರಿಲ್ 30 ರವರೆಗೆ ಮುಂದುವರಿಯಲಿದೆ.

ರಾಜ್ಯದಲ್ಲಿ ಕೋವಿಡ್ -19 ಅನ್ನು ನಿಯಂತ್ರಿಸುವ ವಿವಿಧ ಕ್ರಮಗಳನ್ನು ಪರಿಶೀಲಿಸಿದ ನಂತರ, ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗೆ ಮುಂದಿನ ಕ್ರಮವಾಗಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವಿಧಿಸಲು ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ತಿಳಿಸಿದ್ದಾರೆ.

ಕರ್ಫ್ಯೂ ಅವಧಿಯಲ್ಲಿ, ಆಸ್ಪತ್ರೆಗಳು, ರೋಗ ಪತ್ತೆ ಪ್ರಯೋಗಾಲಯಗಳು, ಔಷಧಾಲಯಗಳು ಮತ್ತು ಅಗತ್ಯ ಸೇವೆಗಳ ಪೂರೈಕೆ ಹೊರತುಪಡಿಸಿ ಎಲ್ಲಾ ಕಚೇರಿಗಳು, ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳು, ರೆಸ್ಟೋರೆಂಟ್‌ಗಳು ರಾತ್ರಿ 8 ಗಂಟೆಗೆ ಮುಚ್ಚಲ್ಪಡುತ್ತವೆ. ಅಗತ್ಯ ಸೇವೆಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಹೊರತುಪಡಿಸಿ, ಎಲ್ಲಾ ವ್ಯಕ್ತಿಗಳ ಸಂಚಾರಕ್ಕೆ ರಾತ್ರಿ 9 ರಿಂದ ನಿಷೇಧ ವಿಧಿಸಲಾಗಿದೆ.

ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗುವ ಅಥವಾ ಬರುವ ಪ್ರಯಾಣಿಕರು ತಮ್ಮ ಪ್ರಯಾಣ ಟಿಕೆಟ್‌ಗಳನ್ನು ತೋರಿಸಬೇಕು. ಸರಕುಗಳು ಸಾಗಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಅವರಿಗೆ ಪ್ರತ್ಯೇಕ ಅನುಮತಿ ಅಥವಾ ಪಾಸ್ ಅಗತ್ಯವಿಲ್ಲ ಎಂದು ಸೋಮೇಶ್ ಕುಮಾರ್ ಹೇಳಿದ್ದಾರೆ.

SCROLL FOR NEXT