ಕೋವಿಡ್-19 ಲಸಿಕೆ 
ದೇಶ

ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕ್ರಮ: ಉತ್ಪಾದಕರಿಗೆ ಕೇಂದ್ರದಿಂದ 4,500 ಕೋಟಿ ರೂಪಾಯಿ ಆರ್ಥಿಕ ನೆರವು

ಕೊರೋನಾ ಲಸಿಕೆಯನ್ನು ಮೇ.1 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ನೀಡುವುದಕ್ಕಾಗಿ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಲಸಿಕೆ ತಯಾರಿಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ. 

ನವದೆಹಲಿ: ಕೊರೋನಾ ಲಸಿಕೆಯನ್ನು ಮೇ.1 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ನೀಡುವುದಕ್ಕಾಗಿ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಲಸಿಕೆ ತಯಾರಿಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ. 

ಇದರ ಭಾಗವಾಗಿ ಲಸಿಕೆ ತಯಾರಿಕೆ ಮಾಡುವ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಒಟ್ಟು 4,500 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿದೆ. ಈ ಮೊತ್ತವನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಹಾಗೂ ಭಾರತ್ ಬಯೋಟೆಕ್ ಸಂಸ್ಥೆಗಳಿಗೆ ಮುಂದಿನ ಪೂರೈಕೆಗಾಗಿ ಮುಂಗಡ ಹಣದ ರೂಪದಲ್ಲಿ ನೀಡಲಾಗುತ್ತಿದೆ. 

ಎಸ್ಐಐ 200 ಮಿಲಿಯನ್ ಡೋಸ್ ಗಳಷ್ಟು ಲಸಿಕೆಯನ್ನು ಹಾಗೂ ಭಾರತ್ ಬಯೋಟೆಕ್ ಸಂಸ್ಥೆ 90 ಮಿಲಿಯನ್ ಡೋಶ್ ಗಳಷ್ಟು ಲಸಿಕೆಯನ್ನು ಸರ್ಕಾರಕ್ಕೆ ಈ ಹಿಂದಿನ 150 ರೂಪಾಯಿಗಳ ದರದಲ್ಲಿ ಜುಲೈ ವೇಳೆಗೆ ಪೂರೈಕೆ ಮಾಡಲಿದೆ. 

ಸರ್ಕಾರದಿಂದ ಲಸಿಕೆ ತಯಾರಿಕೆ ಸಂಸ್ಥೆಗಳಿಗೆ ಹೆಚ್ಚುವರಿ ಲಸಿಕೆ ತಯಾರಿಸುವುದಕ್ಕೆ ಅನುವು ಮಾಡಿಕೊಡುವುದಕ್ಕಾಗಿ ಹಲವು ನಿಯಮಗಳನ್ನು ಸಡಿಲಗೊಳಿಸಲಾಗಿದ್ದು, ಬ್ಯಾಂಕ್ ಗ್ಯಾರೆಂಟಿ ಇಲ್ಲದೇ ಮುಂಗಡ ಪಾವತಿಗೆ ಅನುಮತಿ ನೀಡಲಾಗಿದೆ. ಸರ್ಕಾರದ ಯೋಜನೆಯ ಭಾಗವಾಗಿ ಎಸ್ಐಐಗೆ 3,000 ಕೋಟಿ ಮುಂಗಡವಾಗಿ ಸಿಗಲಿದ್ದರೆ, ಭಾರತ್ ಬಯೋಟೆಕ್ ಗೆ 1,500 ಕೋಟಿ ರೂಪಾಯಿ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್