ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 2.59 ಲಕ್ಷ ಕೇಸ್ ಪತ್ತೆ, 1,761 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದಲ್ಲಿಂದು 2,59,170 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದಲ್ಲಿಂದು 2,59,170 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಒಟ್ಟಾರೆ 2,34,692 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 1,761 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,80,530ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,31,977ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,54,761 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,31,08,582ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 15,19,486 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 26,94,14,035 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 12,71,29,113 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT