ದೇಶ

ಜಾರ್ಖಂಡ್ ನಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಸಿಎಂ ಹೇಮಂತ್ ಸೊರೆನ್

Lingaraj Badiger

ರಾಂಚಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ರಾಜ್ಯ ಸರ್ಕಾರದ ಮೂಲಗಳ ಪ್ರಕಾರ, ಏಪ್ರಿಲ್ 22 ರಂದು ಬೆಳಗ್ಗೆ 6 ರಿಂದ ಏಪ್ರಿಲ್ 29 ರಂದು ಸಂಜೆ 6 ಗಂಟೆಯ ರವರೆಗೆ ಲಾಕ್ ಡೌನ್ ಜಾರಿಯಾಗಲಿದೆ. ಪರಿಸ್ಥಿತಿಯನ್ನು ಗಮನಿಸಿದ ನಂತರ ಲಾಕ್ ಡೌನ್ ಮತ್ತಷ್ಟು ದಿನ ವಿಸ್ತರಿಸುವ ಸಾಧ್ಯತೆ ಇದೆ.

ಆದಾಗ್ಯೂ, ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. 
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಚೇರಿಗಳು ಸೇರಿದಂತೆ ಇತರೆ ಎಲ್ಲಾ ಖಾಸಗಿ ಕಚೇರಿಗಳನ್ನು ಸಹ ಬಂದ್ ಮಾಡಲಾಗುತ್ತಿದೆ.

"ಕರೋನಾ ವೈರಸ್ ಚೈನ್ ಬ್ರೇಕ್ ಮಾಡಲು ಏಪ್ರಿಲ್ 22 ರಿಂದ ಏಪ್ರಿಲ್ 29 ರವರೆಗೆ 'ಸ್ವಾಸ್ಥ್ಯ ಸುರಕ್ಷಾ ಸಪ್ತಾಹ'ವನ್ನು ಆಚರಿಸಲು ನಾವು ನಿರ್ಧರಿಸಿದ್ದೇವೆ. ಅದರ ಅಡಿಯಲ್ಲಿ ಅಗತ್ಯ ವಸ್ತುಗಳ ಮಾರಾಟ ಮಾಡುವುದನ್ನು ಹೊರತುಪಡಿಸಿ ಇತರೆ ಎಲ್ಲಾ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಬಂದ್ ಮಾಡಲಾಗುವುದು ಎಂದು ಸಿಎಂ ಸೊರೆನ್ ತಿಳಿಸಿದ್ದಾರೆ.

SCROLL FOR NEXT