ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ: ಪಿಯೂಷ್ ಗೋಯಲ್
ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2 ಬಿ ಹಂತಕ್ಕೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ನವದೆಹಲಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2 ಬಿ ಹಂತಕ್ಕೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
2ಎ ಹಂತದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆಆರ್ ಪುರಂವರೆಗೆ ಹಾಗೂ 2ಬಿ ಹಂತದಲ್ಲಿ ಕೆಆರ್ ಪುರಂನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.
ಒಟ್ಟಾರೇ, 58.19 ಕಿಲೋ ಮೀಟರ್ ಉದ್ದದ ಈ ಯೋಜನೆಗೆ ಒಟ್ಟಾರೇ. 14,788,101 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ.
ಇದರಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.