ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 2.95 ಲಕ್ಷ ಹೊಸ ಕೇಸ್ ಪತ್ತೆ, 2,023 ಮಂದಿ ಸಾವು

ಭಾರತದಲ್ಲಿ ಕೊರೋನಾ ಆಬ್ಬರ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,95,041 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಆಬ್ಬರ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,95,041 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಒಂದೇ ದಿನ 2,95,041 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,023 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,57,538ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,67,457 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,32,76,039ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 16,39,357 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,10,53,392 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 13,01,19,310 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್