ದೇಶ

ಎಲ್ಲಾ ವಯಸ್ಕರಿಗೆ ಉಚಿತ ಕೋವಿಡ್ ಲಸಿಕೆ ಘೋಷಿಸಿದ ಮಧ್ಯ ಪ್ರದೇಶ

Lingaraj Badiger

ಭೋಪಾಲ್: ಮೇ 1 ರಿಂದ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಬುಧವಾರ ಘೋಷಿಸಿದೆ. ಇದರೊಂದಿಗೆ ಲಸಿಕೆ ಉಚಿತವಾಗಿ ನೀಡುವುದಾಗಿ ಘೋಷಿಸಿದ ಬಿಜೆಪಿ ಆಡಳಿತವಿರುವ ಮೂರನೇ ರಾಜ್ಯವಾಗಿದೆ.

ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಲು ಅರ್ಹರು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾ. ಮಧ್ಯಪ್ರದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.

ಕೊರೋನಾ ವೈರಸ್ ಅನ್ನು ನಿಗ್ರಹಿಸಬೇಕಾದರೆ, ಅದರ ಸೋಂಕಿನ ಸರಪಳಿಯನ್ನು ಮುರಿಯಬೇಕು ಮತ್ತು ಇದಕ್ಕಾಗಿ ಜನರು ಮನೆಯಲ್ಲೇ ಉಳಿಯಬೇಕು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.

ಕೊರೋನಾ ವೈರಸ್ ಚೈನ್ ಬ್ರೇಕ್ ಮಾಡಲು ಏಪ್ರಿಲ್ 30 ರವರೆಗೆ ಜನರು ತಮ್ಮ ತಮ್ಮ ಪ್ರದೇಶಗಳಲ್ಲಿಯೇ ಜನತಾ ಕರ್ಫ್ಯೂ(ಸಾರ್ವಜನಿಕ ಕರ್ಫ್ಯೂ) ವಿಧಿಸಿಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

SCROLL FOR NEXT