ಭಾರ್ಗವ 
ದೇಶ

ಬಾಲಕಿಯನ್ನು ರೇಪ್ ಮಾಡಿ 4 ತಿಂಗಳ ಗರ್ಭಿಣಿಯಾಗಿಸಿದ ಆರೋಪ: ಟಿಕ್ ಟಾಕ್ ಖ್ಯಾತಿಯ ಭಾರ್ಗವ ಬಂಧನ, ಆತನ ವಿಡಿಯೋಗಳು!

ಟಿಕ್ ಟಾಕ್ ಮೂಲಕ ರಾತ್ರೋರಾತ್ರಿ ಸ್ಟಾರ್ ಗಳಾದವರೂ ಸಾಕಷ್ಟು ಜನರಿದ್ದಾರೆ. ಅದೇ ರೀತಿ ಹೆಸರು ಮಾಡಿದ್ದ ಫನ್ ಬಕೆಟ್ ಖ್ಯಾತಿಯ ಭಾರ್ಗವ ಎಂಬಾತನನ್ನು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬಂಧಿಸಲಾಗಿದೆ. 

ಟಿಕ್ ಟಾಕ್ ಮೂಲಕ ರಾತ್ರೋರಾತ್ರಿ ಸ್ಟಾರ್ ಗಳಾದವರೂ ಸಾಕಷ್ಟು ಜನರಿದ್ದಾರೆ. ಅದೇ ರೀತಿ ಹೆಸರು ಮಾಡಿದ್ದ ಫನ್ ಬಕೆಟ್ ಖ್ಯಾತಿಯ ಭಾರ್ಗವ ಎಂಬಾತನನ್ನು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬಂಧಿಸಲಾಗಿದೆ. 

ಆಂಧ್ರದ ವಿಜಯನಗರಂ ಜಿಲ್ಲೆಯ ಕೊಟ್ಟವಲಸಾ ಏರಿಯಾದ ನಿವಾಸಿಯಾಗಿರುವ ಭಾರ್ಗವ ಟಿಕ್ ಟಾಕ್ ವಿಡಿಯೋಗಳ ಮೂಲಕ ಫೇಮಸ್ ಆಗಿದ್ದ. ಆತ ಫೇಮಸ್ ಆಗುತ್ತಿದ್ದಂತೆ ಆತನಿಗೆ ಫ್ಯಾನ್ ಫಾಲೋವರ್ಸ್ ಗಳು ಜಾಸ್ತಿಯಾದರು. ಚಾಟಿಂಗ್ ವೇಳೆ ವಿಶಾಖಪಟ್ಟಣಂ ಜಿಲ್ಲೆಯ ಸಿನ್ಹಗಿರಿ ಕಾಲನಿಯ 14 ವರ್ಷದ ಬಾಲಕಿಯ ಪರಿಚಯವಾಗಿದೆ.

ಚಾಟಿಂಗ್ ಮೂಲಕ ಇಬ್ಬರ ಪರಿಚಯ ಹೆಚ್ಚಾಗಿದೆ. ನಂತರ ಪರಸ್ಪರ ಭೇಟಿಯಾಗುವುದು ಜೊತೆಯಲ್ಲಿ ಕಾಲಕಳೆಯುವುದು ಹೆಚ್ಚಾಗಿದೆ. ಇನ್ನು ಟಿಕ್ ಟಾಕ್ ವಿಡಿಯೋ ಮಾಡುವ ಸಲುವಾಗಿ ಬಾಲಕಿಯನ್ನು ಪುಸಲಾಯಿಸಿ ರೂಂಮಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಬಾಲಕಿ ಬಟ್ಟೆ ಬದಲಿಸುತ್ತಿರುವ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿದುಕೊಂಡು ನಂತರ ಅದನ್ನು ತೋರಿಸಿ ಬೆದರಿಸಿ ಹಲವು ಬಾರಿ ಬಾಲಕಿ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. 

ಇನ್ನು ಮಗಳಲ್ಲಿ ಆದ ಬದಲಾವಣೆಯನ್ನು ಗಮನಿಸಿದ ತಾಯಿ ಮಗಳನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದ್ದಾರೆ. ಈ ವೇಳೆ ಬಾಲಕಿ 4 ತಿಂಗಳ ಗರ್ಭಿಣಿ ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ. ಇದರಿಂದ ಆತಂಕಗೊಂಡ ಬಾಲಕಿಯ ತಾಯಿ ಇದೇ ತಿಂಗಳ 16ರಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು ತನ್ನ ಮಗಳ ಈ ಪರಿಸ್ಥಿತಿಗೆ ಫನ್ ಬಕೆಟ್ ಭಾರ್ಗವ ಕಾರಣ ಎಂದು ದೂರಿದ್ದಾರೆ. 

ಈ ಸಂಬಂಧ ಪೊಲೀಸರು ಭಾರ್ಗವ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆತನನ್ನು ಬಂಧಿಸಿದ್ದಾರೆ.

ಇನ್ನು ಈ ಹಿಂದೆ ಭಾರ್ಗವ ಜೊತೆ ಟಿಕ್ ಟಾಕ್ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದ ಯುವತಿಯರ ಫೋಟೋಗಳನ್ನು ಹಾಕಿ ಕೆಲ ಟ್ರೋಲಿಗಳು ಈ ಪ್ರಕರಣ ಯುವತಿ ಈಕೆ ಎಂದು ವಿಡಿಯೋ ಮಾಡುತ್ತಿದ್ದು ಈ ಸಂಬಂಧ ಆ ಯುವತಿಯರು ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT