ದೇಶ

ಅಸ್ಸಾಂ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಕುದುರೆ ವ್ಯಾಪಾರಕ್ಕೆ ಹೆದರಿ ಕಾಂಗ್ರೆಸ್ ಅಭ್ಯರ್ಥಿಗಳು ರೆಸಾರ್ಟ್ ಗೆ ಶಿಫ್ಟ್!

Lingaraj Badiger

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂಶದ ದಿನ ಹತ್ತಿರವಾಗುತ್ತಿದ್ದಂತೆ, ಬಿಜೆಪಿಯ ಕುದುರೆ ವ್ಯಾಪಾರಕ್ಕೆ ಹೆದರಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಗುವಾಹಟಿಯ ಹೊರವಲಯದಲ್ಲಿರುವ ಸುಂದರವಾದ ಸೋನಾಪುರದ ರೆಸಾರ್ಟ್‌ಗೆ ಶಿಫ್ಟ್ ಮಾಡಿದೆ.

ಎಲ್ಲಾ ಅಭ್ಯರ್ಥಿಗಳನ್ನು ಒಟ್ಟಿಗೆ ಸೇರಿಸುವುದು ಮತ್ತು ಕುದುರೆ ವ್ಯಾಪಾರ ತಪ್ಪಿಸುವುದು ಕಾಂಗ್ರೆಸ್ ನ ಮೂಲ ಉದ್ದೇಶವಾಗಿದೆ. ಅಸ್ಸಾಂ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೈತ್ರಿಕೂಟ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ 10 ಪಕ್ಷಗಳ ಮಹಾ ಮೈತ್ರಿ ನಡುವೆ ತೀವ್ರ ಪೈಪೋಟಿ ನಡೆದಿತ್ತು.

ಆಡಳಿತರೂಢ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರವನ್ನು ಜನರು ತಿರಸ್ಕರಿಸಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ನಂಬಿದ್ದರಬೂ ಸ್ಪಷ್ಟ ಬಹುಮತ ಪಡೆಯುವ ವಿಶ್ವಾಸ ಇಲ್ಲ. ಹೀಗಾಗಿ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ಮೊರೆ ಹೋಗಿದೆ.

"ನಮ್ಮ ಅಭ್ಯರ್ಥಿಗಳು ಉತ್ತಮ ವಾತಾವರಣದಲ್ಲಿ ಕೆಲವು ದಿನಗಳ ಕಾಲ ಒಟ್ಟಿಗೆ ವಿಶ್ರಾಂತಿ ಪಡೆಯಲು ಬಯಸಿದ್ದಾರೆ. ಇದು ಪಕ್ಷದ ಆಂತರಿಕ ವಿಷಯವಾಗಿದೆ" ಎಂದು ಕಾಂಗ್ರೆಸ್ ವಕ್ತಾರ ಬಬ್ಬೀತಾ ಶರ್ಮಾ ಅವರು ಹೇಳಿದ್ದಾರೆ.

ಆದಾಗ್ಯೂ, ಬಿಜೆಪಿ ಒಂದು ಅಥವಾ ಎರಡು ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದು, ಆಹ್ವಾನ ಕಳುಹಿಸಲು ಪ್ರಾರಂಭಿಸಿದೆ ಎಂದು ಪಕ್ಷದ ಮೂರು ಬಾರಿ ಶಾಸಕರಾಗಿರುವ ರುಪ್ಜ್ಯೋತಿ ಕುರ್ಮಿ ಅವರು ಹೇಳಿದ್ದಾರೆ.

"ನಾವು ಇದನ್ನು ಏಕೆ ಮಾಡುತ್ತಿದ್ದೇವೆ ಎಂದು ಯಾರಾದರೂ ಕೇಳಬಹುದು. ಆದರೆ ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಹೇಗೆ ಸರ್ಕಾರ ರಚಿಸಿದ ಎಂಬ ವಿಷಯ ನೆನಪಿಸಿಕೊಳ್ಳಬೇಕು ಎಂದಿದ್ದಾರೆ.

SCROLL FOR NEXT