ರಾಹುಲ್ ಗಾಂಧಿ 
ದೇಶ

ಟೊಳ್ಳು ಭಾಷಣ ಬಿಟ್ಟು ಕೊರೋನಾಗೆ ಪರಿಹಾರ ನೀಡಿ: ಕೇಂದ್ರಕ್ಕೆ ರಾಹುಲ್ ಗಾಂಧಿ

ಕೊರೋನಾ ಪರಿಸ್ಥಿತಿ ಕುರಿತು ಭಾಷಣಗಳನ್ನು ಮಾಡುವ ಬದಲು ದೇಶದ ಜನತೆಗೆ ಪರಿಹಾರವನ್ನು ನೀಡಲಿ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಕೊರೋನಾ ಪರಿಸ್ಥಿತಿ ಕುರಿತು ಭಾಷಣಗಳನ್ನು ಮಾಡುವ ಬದಲು ದೇಶದ ಜನತೆಗೆ ಪರಿಹಾರವನ್ನು ನೀಡಲಿ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಕೊರೋನಾ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ನಾನು ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಬೇಸರ ತರಿಸುವ ಸುದ್ದಿಗಳು ಬರುತ್ತಲೇ ಇವೆ. ಭಾರತದಲ್ಲಿ ಇಂದು ಕೊರೋನಾದಿಂದ ಬಿಕ್ಕಟ್ಟು ಎದುರಾಗಿಲ್ಲ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದಾಗಿ ಎದುರಾಗಿದೆ. ಕೇಂದ್ರ ಸರ್ಕಾರ ಟೊಳ್ಳು ಭಾಷಣ ಮಾಡುವ ಬದಲು ಕೊರೋನಾಗೆ ಪರಿಹಾರವನ್ನು ನೀಡಲಿ ಎಂದು ಹೇಳಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ರಾಹುಲ್ ಗಾಂಧಿಯವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಪ್ರಸ್ತುತ ಹೋಂ ಕ್ವಾರಂಟೈನ್ ನಲ್ಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT