ಪ್ರಿಯಾಂಕಾ ಗಾಂಧಿ 
ದೇಶ

ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿ ಯೋಗಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕಾ ವಾದ್ರಾ

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಕೊರೋನಾ ನಿರ್ವಹಣೆ ಉತ್ತರ ಪ್ರದೇಶ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಮತ್ತೊಂದು ಕನ್ನಡಿಯಾಗಿದೆ.

ದುರಂಹಕಾರ ಮತ್ತು ನಿರಂಕುಶಾಧಿಕಾರ ಹಾಗೂ ಅಮಾನವೀಯತೆಯಿಂದ ಜನರ ಜೊತೆ ಸರ್ಕಾರ ವರ್ತಿಸುತ್ತಿದೆ ಎಂದು ದೂರಿದ್ದಾರೆ. ಕೊರೊನಾ ವೈರಸ್ ಪ್ರಕರಣಗಳ ತೀವ್ರ ಏರಿಕೆಯಿಂದಾಗಿ ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಬುಧವಾರ 33,214 ಹೊಸ ಪ್ರಕರಣಗಳು ಮತ್ತು 187 ಸಾವುಗಳು ದಾಖಲಾಗಿವೆ ಎಂದು ಸರ್ಕಾರ ಹೇಳಿದೆ.

ಯೋಗಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುವುದನ್ನು ನಿಲ್ಲಿಸಿದೆ, ಜನರಿಗೆ ಅಗತ್ಯವಾದ ನೆರವು ಸೌಲಭ್ಯ ನೀಡುವುದು ಸರ್ಕಾರದ ಮೂಲಭೂತ ಹಕ್ಕಾಗಿದೆ. ಯಾವುದೇ ಸಿದ್ಧತೆ, ಪೂರ್ವಾಲೋಚನೆಯಿಲ್ಲದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿರುವುದೇ ಇದಕ್ಕೆಲ್ಲಾ ಕಾರಣ ಎಂದು ದೂರಿದ್ದಾರೆ,

ಪ್ರಪಂಚದಾದ್ಯಂತದ ದೇಶಗಳು ಎರಡನೇ ಅಲೆ ಎದುರಿಸುತ್ತಿವೆ, ನಾವು ಅವರಿಂದ ಏನು ಕಲಿತಿದ್ದೇವೆ? ತಯಾರಿಸಲು ನಾವು ಮೊದಲ ಮತ್ತು ಎರಡನೆಯ ಅಲೆಯ ನಡುವಿನ ಸಮಯವನ್ನು ನಾವು  ಹೇಗೆ ಬಳಸಿದ್ದೇವೆ? ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT