ದೇಶ

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಂದ ಶೇ.75 ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಸರ್ಕಾರ

Nagaraja AB

ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ, ಯುಪಿ, ದೆಹಲಿ ಸೇರಿದಂತೆ ಮತ್ತಿತರ 10 ರಾಜ್ಯಗಳಿಂದ ಶೇ.75 ರಷ್ಟು ಅಂದರೆ, 3,14,835 ಹೊಸ ಪ್ರಕರಣಗಳು ಒಂದೇ ದಿನ ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಕಳೆದ 24 ಗಂಟೆಗಳಲ್ಲಿ 3.14 ಲಕ್ಷ ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1,59,30, 965ಕ್ಕೆ ಏರಿಕೆಯಾಗಿದೆ. ಈ ಹತ್ತು ರಾಜ್ಯಗಳ ಕರ್ನಾಟಕ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ, ಬಿಹಾರ ಮತ್ತು ರಾಜಸ್ಥಾನ ಕೂಡಾ ಸೇರಿವೆ.

ಮಹಾರಾಷ್ಟ್ರದಲ್ಲಿ ಅತ್ಯಧಿಕ 67,468 ದೈನಂದಿನ ಹೊಸ ಪ್ರಕರಣಗಳು ವರದಿಯಾಗಿದ್ದರೆ, ಉತ್ತರ ಪ್ರದೇಶದಲ್ಲಿ 33, 106 ಮತ್ತು ದೆಹಲಿಯಲ್ಲಿ 24,638 ಹೊಸ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22,91,428ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿನ ಒಟ್ಟಾರೇ ಸೋಂಕಿತರ ಸಂಖ್ಯೆ ಶೇ.14.38 ರಷ್ಟಾಗಿದೆ. 

ಕಳೆದ 24 ಗಂಟೆಗಳಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ  1,33,890ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೇ ಸಕ್ರಿಯ ಪ್ರಕರಣಗಳಲ್ಲಿ  ಮಹಾರಾಷ್ಟ್ರ. ಛತ್ತೀಸ್ ಗಢ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಕೇರಳದಿಂದ ಶೇ.59. 66 ರಷ್ಟು ಪ್ರಕರಣಗಳು ವರದಿಯಾಗಿವೆ. ಒಂದೇ ದಿನ 1,78,841 ರೋಗಿಗಳು ಗುಣಮುಖರೊಂದಿಗೆ ದೇಶದಲ್ಲಿ ಗುಣಮುಖರಾದವರ ಸಂಖ್ಯೆ 1,34,54,880ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಮರಣ ಪ್ರಮಾಣ ಶೇ. 1.16 ರಷ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,104 ಸಾವು ಪ್ರಕರಣಗಳು ವರದಿಯಾಗಿರುವುದಾಗಿ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್ ಲಸಿಕೆ ಪಡೆದವರ ಸಂಖ್ಯೆ 13.23 ಕೋಟಿಗೆ ದಾಟಿದೆ. ಇಂದು ಬೆಳಗ್ಗೆ 7 ಗಂಟೆಯವರೆಗೂ 13,23,30,644 ಡೋಸ್ ಲಸಿಕೆ ನೀಡಲಾಗಿದೆ. ಈವರೆಗೂ ಎಂಟು ರಾಜ್ಯಗಳಲ್ಲಿ ಶೇ. 59. 25 ರಷ್ಟು ಡೋಸ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 22 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಒಟ್ಟಾರೇ, 15,01,704 ಜನರು ಲಸಿಕೆ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

SCROLL FOR NEXT