ದೇಶ

ನಾಸಿಕ್ ನ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ ದುರಂತ: ಮುಂಬೈ ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಅರ್ಜಿ ದಾಖಲು

Sumana Upadhyaya

ಮುಂಬೈ; ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಅಲ್ಲದೆ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಮಹಾರಾಷ್ಟ್ರ ಸರ್ಕಾರವನ್ನು ಕೇಳಿದೆ. ನಾಸಿಕ್ ಮಹಾನಗರ ಪಾಲಿಕೆಯಿಂದ ಕೋವಿಡ್ ರೋಗಿಗಳಿಗೆ ಚಿಕತ್ಸೆ ನೀಡುತ್ತಿರುವ ಆಸ್ಪತ್ರೆ ಇದಾಗಿದೆ.

ತನಿಖೆಗೆ ಸಮಿತಿ ನೇಮಕ: ವಿಭಾಗೀಯ ಆಯುಕ್ತ ರಾಧಾಕೃಷ್ಣ ಗಮೆ ನೇತೃತ್ವದಲ್ಲಿ ಏಳು ಸದಸ್ಯರನ್ನೊಳಗೊಂಡ ತನಿಖಾ ಸಮಿತಿಯನ್ನು ನೇಮಿಸಲಾಗಿದ್ದು ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ ಪ್ರಕರಣವನ್ನು ತನಿಖೆ ಮಾಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT