ಸಾಂದರ್ಭಿಕ ಚಿತ್ರ 
ದೇಶ

ಕದ್ದ ಲಸಿಕೆಯನ್ನು ವಾಪಸ್ ತಂದಿಟ್ಟು ಕ್ಷಮೆ ಕೋರಿದ ಕಳ್ಳರು: ಚೋರರಲ್ಲೂ ಕರುಣೆ ಹುಟ್ಟಿಸಿದ ಕೊರೋನಾ!

ಕಳ್ಳತನ ಮಾಡಿದ್ದ ಬಾಕ್ಸ್​ನಲ್ಲಿ ಕೊರೋನಾ ವ್ಯಾಕ್ಸಿನ್​ ಇದ್ದಿದ್ದನ್ನು ಕಂಡ ಕಳ್ಳರು ಬಾಕ್ಸನ್ನು ಪೊಲೀಸ್​ ಠಾಣೆಯ ಬಳಿ ಬಿಟ್ಟು ಹೋಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣ: ಕಳ್ಳತನ ಮಾಡಿದ್ದ ಬಾಕ್ಸ್​ನಲ್ಲಿ ಕೊರೋನಾ ವ್ಯಾಕ್ಸಿನ್​ ಇದ್ದಿದ್ದನ್ನು ಕಂಡ ಕಳ್ಳರು ಬಾಕ್ಸನ್ನು ಪೊಲೀಸ್​ ಠಾಣೆಯ ಬಳಿ ಬಿಟ್ಟು ಹೋಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಕದ್ದ ಬಾಕ್ಸ್ ಜೊತೆಗೆ ಪತ್ರವನ್ನೂ ಬರೆದಿರುವ ಕಳ್ಳರು ನಮ್ಮನ್ನು ಕ್ಷಮಿಸಿ. ಬಾಕ್ಸ್​​ನಲ್ಲಿ ವ್ಯಾಕ್ಸಿನ್​ ಇದೆ ಎಂದು ತಿಳಿಯದೇ ಕದ್ದಿದ್ದಕ್ಕೆ ಕ್ಷಮೆ ಇರಲಿ ಎಂದು ಬರೆದಿದ್ದಾರೆ. ತಮ್ಮ ಮಾನವೀಯತೆ ಮೂಲಕ ಕಳ್ಳರು ಪೊಲೀಸರ ಮನಗೆದ್ದಿದ್ದಾರೆ.

ಇಂಥ ಅಪರೂಪದ ಘಟನೆ ನಡೆದಿರೋದು ಜಿಂದ್​ ಜಿಲ್ಲೆಯ ಆಸ್ಪತ್ರೆಯಲ್ಲಿ. ಬುಧವಾರ ರಾತ್ರಿ ಆಸ್ಪತ್ರೆಗೆ ನುಗ್ಗಿದ್ದ ಕಳ್ಳರು ಸ್ಟೋರ್​ ರೂಂನಲ್ಲಿ ಕೈಗೆ ಸಿಕ್ಕ ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು. ಆಸ್ಪತ್ರೆಯ ಹೆಡ್​​ ನರ್ಸ್​ ಬಂದು ನೋಡುವಷ್ಟರಲ್ಲಿ ಔಷಧಿ ದಾಸ್ತಾನು ಕೊಠಡಿಯ ಬೀಗ ಮುರಿದಿತ್ತು. 

ಒಳಗೆ ಪರಿಶೀಲಿಸಿದಾಗ ವ್ಯಾಕ್ಸಿನ್​ ಇದ್ದ ಬಾಕ್ಸ್​ ಕಣ್ಮರೆಯಾಗಿತ್ತು. ವ್ಯಾಕ್ಸಿನ್​ ಕಳವಿನಿಂದ ಜಿಲ್ಲೆಯಲ್ಲಿ ವಿತರಿಸಲು ಲಸಿಕೆ ಇಲ್ಲದಂತೆ ಆಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು. ವಾಕ್ಸಿನ್​​ ಕಳವಾಗಿದೆ ಎಂದು ದೊಡ್ಡ ಸುದ್ದಿಯಾಗಿತ್ತು.

2 ದಿನಗಳ ನಂತರ ಆಸ್ಪತ್ರೆಯಲ್ಲಿ ಕಳುವಾಗಿದ್ದ ಲಸಿಕೆಗಳಿದ್ದ ಬಾಕ್ಸ್​​ ಸ್ಥಳೀಯ ಪೊಲೀಸ್​ ಠಾಣೆಯ ಬಳಿ ಪತ್ತೆಯಾಗಿತ್ತು. ಬಾಕ್ಸ್​ನಲ್ಲಿ 182 ವೈಯಲ್ಸ್​ ಕೋವಿಶೀಲ್ಡ್​ ಹಾಗೂ 440 ಡೋಸೇಜ್​ ಕೊವ್ಯಾಕ್ಸಿನ್​ ಲಸಿಕೆ ಹಾಗೆಯೇ ಇದ್ದವು, ಬಾಕ್ಸ್​ ಜೊತೆ ಕಳ್ಳರು ಬರೆದಿದ್ದ ಪತ್ರವೂ ಸಿಕ್ಕಿತ್ತು. ಗೊತ್ತಿಲ್ಲದೇ ನಾವು ವ್ಯಾಕ್ಸಿನ್​ ಇದ್ದ ಬಾಕ್ಸನ್ನು ಕದ್ದಿದ್ದೇವೆ.

ಹೀಗಾಗಿ ಬಾಕ್ಸನ್ನು ಹಿಂತಿರುಗಿಸುತ್ತಿದ್ದೇವೆ. ಕ್ಷಮೆ ಇರಲಿ ಎಂದು ಹಿಂದಿಯಲ್ಲಿ ಬರೆಯಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೀಘ್ರವೇ ಕಳ್ಳರನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್