ದೇಶ

ಕೊರೋನಾದಿಂದಲ್ಲ.. ನಿಮ್ಮ ನಿರ್ಲಕ್ಷ್ಯತೆಯಿಂದಲೇ ಹೆಚ್ಚಿನ ಸಾವು: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

Srinivasamurthy VN

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ನಿಂದಲ್ಲ... ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ದೇಶದಲ್ಲಿನ ಆಮ್ಲಜನಕ ಸಿಲಿಂಡರ್ ಗಳ ಕೊರತೆ ಹಾಗೂ ಐಸಿಯು ಬೆಡ್ ಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  

'ಕೊರೋನಾ ವೈರಸ್ ಸೋಂಕಿನಿಂದಾಗಿ ಮನುಷ್ಯನ ದೇಹದಲ್ಲಿ ಆಮ್ಲಜನಕದ ಕೊರತೆ ಮಾತ್ರ ಉಂಟಾಗುತ್ತದೆ. ಆದರೆ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ದೇಶದಲ್ಲಿ ರೋಗಿಗಳಿಗೆ ಅನಿವಾರ್ಯವಾಗಿ ಬೇಕಾದ ಆಮ್ಲಜನಕ ಜನಕದ ಸಿಲಿಂಡರ್ ಗಳು ಮತ್ತು ಐಸಿಯು ಬೆಡ್ ಕೊರತೆಯುಂಟಾಗಿದೆ. ಇದರಿಂದಲೇ  ಸಾವಿರಾರು ಮಂದಿ ನಿತ್ಯ ಸಾವಿಗೀಡಾಗುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ದೇಶದಲ್ಲಿ ಇಂದು ದಾಖಲೆಯ 3.32 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದು ಈ ವರೆಗಿನ ದಾಖಲೆಯಾಗಿ ಉಳಿದಿದೆ. ಅಂತೆಯೇ 2,263 ಸೋಂಕಿತರು ಕೋವಿಡ್ ಸೋಂಕಿನಿಂದಾಗಿ ಬಲಿಯಾಗಿದ್ದಾರೆ.

SCROLL FOR NEXT