ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ 
ದೇಶ

ವಿರಾರ್ ಆಸ್ಪತ್ರೆಯ ಬೆಂಕಿ ದುರಂತ ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರವೇ ಹಣಕಾಸು ನೆರವು ನೀಡುತ್ತದೆ: ಮಹಾರಾಷ್ಟ್ರ ಆರೋಗ್ಯ ಸಚಿವ

ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ, ವಿರಾರ್ ಆಸ್ಪತ್ರೆ ಬೆಂಕಿ ದುರಂತ ಪ್ರಕರಣ ರಾಷ್ಟ್ರೀಯ ಸುದ್ದಿಯಲ್ಲ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಆಕ್ಸಿಜನ್, ರೆಮೆಡಿಸಿವಿರ್ ಕೊರತೆ ಬಗ್ಗೆ ಮಾತನಾಡುತ್ತೇವೆ, ಮಹಾರಾಷ್ಟ್ರಕ್ಕೆ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಬೇಕೆನ್ನುವ ವಿಚಾರವನ್ನು, ವಿರಾರ್ ಆಸ್ಪತ್ರೆಯ ಬೆಂಕಿ ದುರ್ಘಟನೆ ಬಗ್ಗೆ ಕೂಡ ಮಾತನಾಡುತ್ತೇವೆ, ಹಾಗೆಂದು ಇದು ರಾಷ್ಟ್ರಮಟ್ಟದ ಸುದ್ದಿಯಲ್ಲ ಎಂದಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಹಣಕಾಸು ನೆರವು ನೀಡುತ್ತದೆ ಎಂದು ಕೂಡ ಸಚಿವ ರಾಜೇಶ್ ಟೊಪೆ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್