ದೆಹಲಿ ಹೈಕೋರ್ಟ್ 
ದೇಶ

ಆಮ್ಲಜನಕ ಪೂರೈಕೆಗೆ ಅಡ್ಡಿ ಪಡಿಸಿದರೆ ಗಲ್ಲಿಗೇರಿಸುತ್ತೇವೆ: ದೆಹಲಿ ಹೈಕೋರ್ಟ್‌ ಎಚ್ಚರಿಕೆ

ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡಿದರೆ, ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ನವದೆಹಲಿ: ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡಿದರೆ, ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ದೇಶಾದ್ಯಂತ ಮಾರಕ ಕೊರೋನಾ ವೈರಸ್ ಸೋಂಕಿನ 2ನೇ ಅಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದರ ನಡುವೆಯೇ ಆಕ್ಸಿಜನ್ ಇಲ್ಲದೇ ಸಾವನ್ನಪ್ಪುತ್ತಿರುವ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಕಾರಣಕ್ಕೆ  ಕೇಂದ್ರ ಸರ್ಕಾರ ದೇಶಾದ್ಯಂತ ಆಕ್ಸಿಜನ್ ಪೂರೈಕೆಗಾಗಿ ಕ್ರಮಕೈಗೊಂಡಿದ್ದು, ಇದರ ನಿರ್ವಹಣೆಗಾಗಿ ಸಮಿತಿಯೊಂದನ್ನೂ ಕೂಡ ರಚಿಸಿದೆ.

ಏತನ್ಮಧ್ಯೆ ಆಕ್ಸಿಜನ್ ಹೊತ್ತ ಟ್ಯಾಂಕರ್ ಗಳು ಇದೀಗ ದೇಶಾದ್ಯಂತ ಪೂರೈಕೆ ಮಾಡುತ್ತಿದ್ದು, ಕೆಲ ಟ್ಯಾಂಕರ್ ಗಳಿಗೆ ಅಧಿಕಾರಿಗಳು ಅಡ್ಡಿ ಪಡಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಗಂಭೀರ ಸ್ಥಿತಿಯಲ್ಲಿರುವ ಕೋವಿಡ್‌ ರೋಗಿಗಳಿಗೆ ಆಮ್ಲಜನಕದ ಕೊರತೆ ಉಂಟಾಗಿರುವ ಬಗ್ಗೆ ದೆಹಲಿಯ ಮಹಾರಾಜ ಅಗ್ರಸೇನ್‌ ಆಸ್ಪತ್ರೆಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಪಿನ್‌ ಸಂಘಿ ಮತ್ತು ರೇಖಾ ಪಲ್ಲಿ ಅವರ ದ್ವಿಸದಸ್ಯ ಪೀಠವು, ‘ಆಮ್ಲಜನಕ  ಪೂರೈಕೆಗೆ ಅಡ್ಡಿಯನ್ನುಂಟು ಮಾಡಿದ ವ್ಯಕ್ತಿಯ ಬಗ್ಗೆ ತಿಳಿಸಿ ಎಂದು ದೆಹಲಿ ಸರ್ಕಾರಕ್ಕೆ ಸೂಚಿಸಿತು.

ಅಲ್ಲದೆ 'ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡುವ ಯಾರೊಬ್ಬರನ್ನೂ ಬಿಡುವುದಿಲ್ಲ. ಅಂತಹ ಸ್ಥಳೀಯ ಅಧಿಕಾರಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೂ ಮಾಹಿತಿ ನೀಡಿ. ಅವರನ್ನು ಗಲ್ಲಿಗೇರಿಸುತ್ತೇವೆ. ಕೇಂದ್ರವೂ  ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ನ್ಯಾಯಾಲಯ ಹೇಳಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!