ದೇಶ

ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ. ರಮಣ ಪ್ರಮಾಣ ವಚನ ಸ್ವೀಕಾರ

Srinivasamurthy VN

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾದೀಶರಾದ ಎನ್.ವಿ. ರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ಶನಿವಾರ ಬೆಳಗ್ಗೆ ಪ್ರಮಾಣವಚನ ಸ್ವೀಕಾರ ಮಾಡಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು. ಎನ್.ವಿ.ರಮಣ ಅವರಿಗೆ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು. 

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ ಎ ಬೊಬ್ಡೆ ಶುಕ್ರವಾರ ನಿವೃತ್ತಿಗೊಂಡ ಬಳಿಕ ಈ ಮಹತ್ವದ ಸ್ಥಾನವನ್ನು 63 ವರ್ಷದ ನ್ಯಾಯಮೂರ್ತಿ ಎನ್.ವಿ.ರಮಣ ತುಂಬಿದ್ದಾರೆ. ನ್ಯಾ. ರಮಣ ಅವರ ಸೇವಾವಧಿ 2022, ಆಗಸ್ಟ್ 26ರವರೆಗೂ ಇದೆ.  

1957, ಆಗಸ್ಟ್ 27ರಂದು ಜನಿಸಿದ ನ್ಯಾ. ರಮಣ ಅವರು 2000ರ ಜೂನ್​ನಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್​ಗೆ ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ಅದಾದ ಬಳಿಕ ಅವರ ಅವರು ದೆಹಲಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ನಂತರ 2014,  ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಅವರನ್ನ ನೇಮಕ ಮಾಡಲಾಗಿತ್ತು.

SCROLL FOR NEXT