ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು 
ದೇಶ

ವೈದ್ಯಕೀಯೇತರ ಉದ್ದೇಶಗಳಿಗೆ ಆಕ್ಸಿಜನ್ ಬಳಕೆ ನಿಷೇಧ, ಉತ್ಪಾದನೆ ಗರಿಷ್ಠಗೊಳಿಸಲು ಕಂಪನಿಗಳಿಗೆ ಕೇಂದ್ರ ಸೂಚನೆ

ಹೆಚ್ಚಿನ ಜನರಿಗೆ ಆಮ್ಲಜನಕ ಲಭ್ಯವಾಗುವಂತೆ ಮಾಡುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ಲಿಕ್ವಿಡ್ ಆಕ್ಸಿಜನ್ ಬಳಸುವುದನ್ನು..

ನವದೆಹಲಿ: ಹೆಚ್ಚಿನ ಜನರಿಗೆ ಆಮ್ಲಜನಕ ಲಭ್ಯವಾಗುವಂತೆ ಮಾಡುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ಲಿಕ್ವಿಡ್ ಆಕ್ಸಿಜನ್ ಬಳಸುವುದನ್ನು ಭಾನುವಾರ ನಿಷೇಧಿಸಿದೆ ಮತ್ತು ಉತ್ಪಾದನೆಯನ್ನು ಗರಿಷ್ಠಗೊಳಿಸುವಂತೆ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಸೂಚಿಸಿದೆ.

ಕೊರೋನಾ ವೈರಸ್ ಸಾಂಕ್ರಾಮಿಕದ ಹೊಸ ಅಲೆಯಿಂದ ದೇಶ ತತ್ತರಿಸಿದ್ದು, ಅನೇಕ ಭಾಗಗಳಲ್ಲಿ, ವಿಶೇಷವಾಗಿ ದೆಹಲಿಯಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರ ಈ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರ ದೇಶದ ವಿವಿಧ ಭಾಗಗಳಲ್ಲಿ ಆಮ್ಲಜನಕ ಉತ್ಪಾದಿಸಲು ಪ್ರಯತ್ನಿಸುತ್ತಿದೆ ಮತ್ತು ಆಕ್ಸಿಜನ್ ಸಾಗಾಣೆಗೆ ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಆಮ್ಲಜನಕ ಲಭ್ಯವಾಗುವಂತೆ ಮಾಡುತ್ತಿದೆ.

ಇನ್ನು ಕೇಂದ್ರ ಸರ್ಕಾರ ದೇಶದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಯುನೈಟೆಡ್ ಸ್ಟೇಟ್ಸ್‌ನಿಂದ ಆಮ್ಲಜನಕ ಮತ್ತು ಆಮ್ಲಜನಕ ಸಾಂದ್ರಕಗಳನ್ನು ಸಾಗಿಸಲು ಸಿಂಗಾಪುರ ಮತ್ತು ಯುಎಇಯಂತಹ ದೇಶಗಳಿಂದ ಕ್ರಯೋಜೆನಿಕ್ ಟ್ಯಾಂಕ್‌ಗಳನ್ನು ಪಡೆಯುತ್ತಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, "ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ದ್ರವ ಆಮ್ಲಜನಕದ ಬಳಕೆಯನ್ನು ಅನುಮತಿಸಲಾಗುವುದಿಲ್ಲ ಮತ್ತು ಎಲ್ಲಾ ಉತ್ಪಾದನಾ ಘಟಕಗಳು ತಮ್ಮ ದ್ರವ ಆಮ್ಲಜನಕದ ಉತ್ಪಾದನೆಯನ್ನು ಗರಿಷ್ಠಗೊಳಿಸಬೇಕು" ಎಂದು ಆಕ್ಸಿಜನ್ ಘಟಕಗಳಿಗೆ ಸೂಚಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದಾರೆ. 

ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆಕ್ಸಿಜನ್ ವೈದ್ಯಕೀಯ ಉದ್ದೇಶಗಳಿಗಾಗಿ ಮಾತ್ರ ಸರ್ಕಾರಕ್ಕೆ ಲಭ್ಯವಾಗುವಂತೆ ಮಾಡಿ ಎಂದು ಕೇಂದ್ರ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT