ದೇಶ

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಶಶಿ ತರೂರ್ ದೆಹಲಿ ಆಸ್ಪತ್ರೆಗೆ ದಾಖಲು

Lingaraj Badiger

ನವದೆಹಲಿ: ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಭಾನುವಾರ ರಾಷ್ಟ್ರ ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

65 ವರ್ಷದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಏಪ್ರಿಲ್ 21 ರಂದು ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಅಂದಿನಿಂದ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು.

ಶಶಿ ತರೂರ್ ಅವರು ಇಂದು ದೆಹಲಿಯ ಸರಿತಾ ವಿಹಾರ್‌ನಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT