ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

18 ವರ್ಷ ಮೇಲ್ಪಟ್ಟವರಿಗೆ ಶನಿವಾರದಿಂದ ಉಚಿತ ಲಸಿಕೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಶನಿವಾರದಿಂದ ಉಚಿತ ಲಸಿಕೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲು ದೆಹಲಿ ಸರ್ಕಾರ ನಿರ್ಧರಿಸಿದೆ, ಇಂದು 1.34 ಕೋಟಿ ಲಸಿಕೆ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶೀಘ್ರವೇ ಲಸಿಕೆ ಸಂಗ್ರಹಿಸಿ ಜನರಿಗೆ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ದೆಹಲಿ ಸರ್ಕಾರ ನಡೆಸುತ್ತಿರುವ ಆಸ್ಪತ್ರೆಗಳಲ್ಲಿ ಮಾತ್ರ ಉಚಿತ ಲಸಿಕೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಗೆ ಹಣ ನೀಡಬೇಕಾಗುತ್ತದೆ.

ಲಸಿಕೆ ತಯಾರಿಸುವವರು ರಾಜ್ಯಗಳಿಗೆ ಕಡಿಮೆ ಹಣದಲ್ಲಿ ಪೂರೈಸಬೇಕು ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ. ಪ್ರತಿ ಡೋಸ್ ಲಸಿಕೆಗೆ 150 ರು ನಿಗದಿ ಪಡಿಸುವಂತೆ ಮನವಿ ಮಾಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT