ಕೋವಿಡ್-19 ಲಸಿಕೆ 
ದೇಶ

ಕೋವಿಡ್ ಲಸಿಕೆಯ ಬೆಲೆ ಕಡಿಮೆ ಮಾಡುವಂತೆ ಸೆರಂ, ಭಾರತ್ ಬಯೋಟೆಕ್ ಗೆ ಕೇಂದ್ರ ಸೂಚನೆ: ಮೂಲಗಳು

ಇಂತಹ ದೊಡ್ಡ ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಕಂಪನಿಗಳು ಲಾಭ ಗಳಿಸುತ್ತಿವೆ ಎಂದು ಹಲವು ರಾಜ್ಯಗಳು ಕೋವಿಡ್ ಲಸಿಕೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ...

ನವದೆಹಲಿ: ಇಂತಹ ದೊಡ್ಡ ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಕಂಪನಿಗಳು ಲಾಭ ಗಳಿಸುತ್ತಿವೆ ಎಂದು ಹಲವು ರಾಜ್ಯಗಳು ಕೋವಿಡ್ ಲಸಿಕೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ  ಕೇಂದ್ರ ಸರ್ಕಾರ ಸೆರಂ ಸಂಸ್ಥೆ ಮತ್ತು ಭಾರತ್ ಬಯೋಟೆಕ್‌ಗೆ ತಮ್ಮ ಕೋವಿಡ್ -19 ಲಸಿಕೆಗಳ ಬೆಲೆಯನ್ನು ಕಡಿಮೆ ಮಾಡುವಂತೆ ಸೋಮವಾರ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಸಿಕೆ ಬೆಲೆ ಕುರಿತು ಚರ್ಚಿಸಲಾಗಿದ್ದು, ಈಗ ಎರಡು ಕಂಪನಿಗಳು ತಮ್ಮ ಲಸಿಕೆಗಳಿಗೆ ಪರಿಷ್ಕೃತ ಬೆಲೆ ನಿಗದಿಪಡಿಸುವ ನಿರೀಕ್ಷೆಯಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ತನ್ನ ಕೋವಿಡ್ -19 ಲಸಿಕೆ ಕೋವಾಕ್ಸಿನ್ ಅನ್ನು ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 600 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 1,200 ರೂ. ನಿಗದಿಪಡಿಸಿದೆ.

ಇನ್ನು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಪುಣೆ ಮೂಲದ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ತನ್ನ ಕೋವಿಡ್ ಲಸಿಕೆ 'ಕೋವಿಶೀಲ್ಡ್' ಗೆ ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 400 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 600 ರೂ. ನಿಗದಿಪಡಿಸಿದೆ.

ಈ ಎರಡೂ ಲಸಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ಪ್ರತಿ ಡೋಸ್‌ಗೆ 150 ರೂ. ನೀಡಲಾಗುತ್ತಿದೆ. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ರಾಜ್ಯಗಳು ಕೇಂದ್ರ ಮತ್ತು ರಾಜ್ಯಗಳಿಗೆ ಒಂದೇ ರೀತಿಯ ದರ ನಿಗದಿಪಡಿಸುವಂತೆ ಒತ್ತಾಯಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ