ಕೊರೋನಾ ಪರೀಕ್ಷೆ 
ದೇಶ

ದೇಶದಲ್ಲಿ ಮತ್ತೆ 3.52 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 2812 ಮಂದಿ ಸಾವು

ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ 3.5 ಲಕ್ಷ ದಾಟಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ 3.5 ಲಕ್ಷ ದಾಟಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,52,991 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ  2,19,272 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಚೇತರಿಕೆಯಾದವರ ಸಂಖ್ಯೆ 1,43,04,382ಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2812 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,95,123 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 28,13,658 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,02,367 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 27,93,21,177 ಕೋವಿಡ್ ಪರೀಕ್ಷೆಗಳನ್ನು ನಡೆಸಿದಂತಾಗಿದೆ. ಅಂತೆಯೇ ದೇಶದಲ್ಲಿ ಈ ವರೆಗೂ  14,19,11,223 ಡೋಸ್ ಲಸಿಕೆ ನೀಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌