ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ ಮಮತಾ, ಕೇಂದ್ರಿಯ ಪಡೆ ಹಿಂಪಡೆಯಲು ಒತ್ತಾಯ!

ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ ಹಂತದ ಚುನಾವಣೆಯಲ್ಲಿ ಕೋವಿಡ್-19 ತಡೆಗಟ್ಟಲು ಕೇಂದ್ರಿಯ ಪಡೆಗಳನ್ನು ಹಿಂಪಡೆಯಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.

ಕೊಲ್ಕತ್ತಾ: ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ ಹಂತದ ಚುನಾವಣೆಯಲ್ಲಿ ಕೋವಿಡ್-19 ತಡೆಗಟ್ಟಲು ಕೇಂದ್ರಿಯ ಪಡೆಗಳನ್ನು ಹಿಂಪಡೆಯಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.

ಉತ್ತರ ಕೊಲ್ಕತ್ತಾದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮದ್ರಾಸ್ ಹೈಕೋರ್ಟ್ ಆದೇಶವನ್ನು  ಸ್ವಾಗತಿಸುತ್ತೇನೆ. ಚುನಾವಣಾ ಆಯೋಗ ತನ್ನ ಜವಾಬ್ದಾರಿಯಿಂದ ಪಲಾಯನವಾಗದಂತೆ ಸ್ಪಷ್ಟವಾಗಿ ಆದೇಶದಲ್ಲಿ ಹೇಳಲಾಗಿದೆ. ಪಶ್ಚಿಮ ಬಂಗಾಳದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗ ಕಾರಣ ಎಂದು ಆರೋಪಿಸಿದರು.

ಇದಕ್ಕೂ ಮುನ್ನ ಕೋವಿಡ್-19 ಸಾಂಕ್ರಾಮಿಕದ ನಡುವೆ ವಿಧಾನಸಭಾ ಚುನಾವಣೆ ನಡೆಸುತ್ತಿರುವ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿಕಾರಿತ್ತು.

ಮೇ 2 ರಂದು ಕರೂರಿನಲ್ಲಿ ನಡೆಯುವ ಮತ ಎಣಕೆ ವೇಳೆ ಕೋವಿಡ್-19 ಶಿಷ್ಟಚಾರದೊಂದಿಗೆ ಪ್ರಾಮಾಣಿಕವಾಗಿ ಕೌಂಟಿಂಗ್ ನಡೆಸಲು ನಿರ್ದೇಶನ ನೀಡಬೇಕೆಂದು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಚುನಾವಣಾ ಆಯೋಗದ ನಿಲುವು ಅತ್ಯಂತ ಬೇಜಬ್ದಾರಿಯುತದಿಂದ ಕೂಡಿದೆ ಎಂದು ಮುಖ್ಯ ನ್ಯಾಯಾಧೀಶ್ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಾಧೀಶ ಎಸ್ ರಾಮಮೂರ್ತಿ ಅವರನ್ನೊಳಗೊಂಡ ಪೀಠ ಹೇಳಿತ್ತು.

ಕೋವಿಡ್ ಪೀಡಿತ ರಾಜ್ಯಗಳಿಂದ ಸುಮಾರು 2 ಲಕ್ಷ ಕೇಂದ್ರಿಯ ಪಡೆಗಳನ್ನು ಹಿಂಪಡೆಯುವಂತೆ ಮನವಿ ಮಾಡುತ್ತೇನೆ. ಶಾಲಾ- ಕಾಲೇಜುಗಳು ಮತ್ತು ಸುರಕ್ಷಿತ ಮನೆಗಳಲ್ಲಿ ಬಿಡಾರ ಹೂಡಿರುವ ಕೇಂದ್ರೀಯ ಪಡೆಗಳು ಕೋವಿಡ್ ನಿರ್ವಹಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದಾರೆ, ಅವರಲ್ಲಿ ಶೇಕಡಾ 75 ರಷ್ಟು ಜನರು ವೈರಸ್ ಸೋಂಕಿಗೆ ಒಳಗಾಗಬಹುದು. ದಯವಿಟ್ಟು ಅವರನ್ನು ಕೊನೆಯ ಹಂತದಿಂದ ಮತದಾನದಿಂದ ಹಿಂಪಡೆಯಿರಿ ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video