ಸಾಂದರ್ಭಿಕ ಚಿತ್ರ 
ದೇಶ

ದೆಹಲಿ ಕೊರೋನಾ ಬಿಕ್ಕಟ್ಟು: ಬೆಡ್ ಗಾಗಿ ಕಾಯುತ್ತಿದ್ದ ಮಹಿಳೆ ಸಾವು, ಸಂಬಂಧಿಕರಿಂದ ಅಪೊಲೊ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ

ದಕ್ಷಿಣ ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ಮಂಗಳವಾರ ಬೆಡ್ ಗಾಗಿ ಕಾಯುತ್ತಿದ್ದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ...

ನವದೆಹಲಿ: ದಕ್ಷಿಣ ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ಮಂಗಳವಾರ ಬೆಡ್ ಗಾಗಿ ಕಾಯುತ್ತಿದ್ದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಉದ್ಯೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ದೆಹಲಿಯಲ್ಲಿ ಆರೋಗ್ಯ ಸಿಬ್ಬಂದಿಯ ಮೇಲೆ ಕೊರೋನಾ ಸೋಂಕಿತ ರೋಗಿಯ ಕುಟುಂಬದವರು ಹಲ್ಲೆ ನಡೆಸಿದ ಮೊದಲ ಘಟನೆ ಇದಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಈ ಬಗ್ಗೆ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಘಟನೆಯ ಚಿತ್ರಗಳಲ್ಲಿ ನೆಲದ ಮೇಲೆ ರಕ್ತ, ಮುರಿದ ಪೀಠೋಪಕರಣಗಳು ಆಸ್ಪತ್ರೆಯೊಳಗೆ ಹರಡಿಕೊಂಡಿವೆ.

ಘಟನೆಯ ವಿಡಿಯೋದಲ್ಲಿ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಮತ್ತು ಕೆಲವರು ವಾಗ್ವಾದದಲ್ಲಿ ನಿರತರಾಗಿದ್ದು, ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಪರಸ್ಪರ ಕೋಲುಗಳಿಂದ ಹೊಡೆದಾಡಿಕೊಂಡಿದ್ದಾರೆ.

ಮಂಗಳವಾರ ಮುಂಜಾನೆ ಮಹಿಳೆಯನ್ನು ಗಂಭೀರ ಸ್ಥಿತಿಯಲ್ಲಿ ಕರೆತರಲಾಗಿತ್ತು. ಆಕೆಯ ಸ್ಥಿತಿಗೆ ಸೂಕ್ತವಾದ ವೈದ್ಯಕೀಯ ಚಿಕಿತ್ಸೆಯನ್ನು ನಮ್ಮ ತಂಡ ನೀಡಿದೆ. ಬೆಡ್ ಗಳ ಕೊರತೆಯಿಂದಾಗಿ, ರೋಗಿಯನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕುಟುಂಬಕ್ಕೆ ಸೂಚಿಸಲಾಯಿತು ಎಂದು ಆಸ್ಪತ್ರೆಯ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದುರದೃಷ್ಟವಶಾತ್, ರೋಗಿಯು ಬೆಳಗ್ಗೆ 8 ರ ಸುಮಾರಿಗೆ ಸಾವನ್ನಪ್ಪಿದರು, ಅದರ ನಂತರ ಅವರ ಕುಟುಂಬ ಸದಸ್ಯರು ವಿಧ್ವಂಸಕ ಕೃತ್ಯ ಎಸಗಿದ್ದು, ಆಸ್ಪತ್ರೆಯ ಆಸ್ತಿ ನಾಶ ಮಾಡಿ, ನಮ್ಮ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದರು" ಎಂದು ಆಸ್ಪತ್ರೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT