ಕರುಣಾ ಶುಕ್ಲಾ 
ದೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೋದರ ಸೊಸೆ ಕರುಣಾ ಶುಕ್ಲಾ ಕೊರೋನಾದಿಂದ ನಿಧನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡರಾದ ಕರುಣಾ ಶುಕ್ಲಾ ಅವರು ಕೊಯಿಡ್ -19 ನಿಂದ ಸಾವನ್ನಪ್ಪಿದ್ದಾರೆ. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಯಲ್ಲಿ ಅವರು ಮಂಗಳವಾರ ಮುಂಜಾನೆ ನಿಧನರಾದರು.

ರಾಯ್ಪುರ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡರಾದ ಕರುಣಾ ಶುಕ್ಲಾ ಅವರು ಕೊಯಿಡ್ -19 ನಿಂದ ಸಾವನ್ನಪ್ಪಿದ್ದಾರೆ. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಯಲ್ಲಿ ಅವರು ಮಂಗಳವಾರ ಮುಂಜಾನೆ ನಿಧನರಾದರು.

ಕೋವಿಡ್ ಗೆ ಪಾಸಿಟಿವ್ ವರದಿ ಪಡೆದ ಬಳಿಕ ಶುಕ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

32 ವರ್ಷಗಳ ಕಾಲ ವಿವಿಧ ಸ್ಥಾನಮಾನಗಳ ಜವಾಬ್ದಾರಿ ಹೊತ್ತು ಬಿಜೆಪಿಯಲ್ಲಿದ್ದ ಶುಕ್ಲಾ, ಕೇಸರಿ ಪಕ್ಷವು ತನ್ನ ಉಮೇದುವಾರಿಕೆಯನ್ನು ಕಡೆಗಣಿಸಿದ ಆರೋಪದ ಬಳಿಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ 2013 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಸೇರಿದ್ದರು.2018 ರ ಛತ್ತೀಸ್ ಘರ್ ವಿಧಾನಸಭೆ ಚುನಾವಣೆಯಲ್ಲಿ ರಾಜನಂದಗಾಂವ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷದ ಟಿಕೆಟ್‌ನಲ್ಲಿ ಅವರು ತಮ್ಮ ಕೊನೆಯ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಛತ್ತೀಸ್ ಘರ್ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಕರುಣಾ ಶುಕ್ಲಾ ಅವರ ನಿಧನದ ಬಗ್ಗೆ ದಂತಾಪ ವ್ಯಕ್ತಪಡಿಸಿದರು ಮತ್ತು ಅವರೊಂದಿಗೆ ರಾಜಕೀಯದ ಹೊರತಾಗಿ ನಿಕಟ ಕೌಟುಂಬಿಕ ಸಂಬಂಧವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!