ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 3.60 ಲಕ್ಷ ಸೋಂಕಿತರು ಪತ್ತೆ, 3,293 ಮಂದಿ ಸಾವು

ಭಾರತದಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದಲ್ಲಿಂದು 3,60,960 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದಲ್ಲಿಂದು 3,60,960 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3293 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 2,01,187ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 29,78,709ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,61,162 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,48,17,371ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 17,23,912 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,27,03,789 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 14,78,27,367 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ