ದೇಶ

ಕೇರಳದಲ್ಲಿ ಕೋವಿಡ್‍ ನ 35,013 ಹೊಸ ಪ್ರಕರಣಗಳು ವರದಿ

Lingaraj Badiger

ತಿರುವನಂತಪುರಂ: ಕೇರಳದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 35,013 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 35,013 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 41 ಸೋಂಕಿತರು ಮೃತಪಟ್ಟಿದ್ದಾರೆ. 15,505 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. 

ಕಳೆದ 24 ಗಂಟೆಗಳಲ್ಲಿ, ಬ್ರಿಟನ್‍ ನಿಂದ ಇತ್ತೀಚೆಗೆ ಕೇರಳಕ್ಕೆ ಆಗಮಿಸಿದ ಯಾವುದೇ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿಲ್ಲ. ಇವರಲ್ಲಿ ಒಟ್ಟು 116 ಜನರ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಪುಣೆಯ ರಾಷ್ಟ್ರೀಯ ವೈರಾಣುಶಾಸ್ತ್ರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಈವರೆಗೆ ಬ್ರಿಟನ್‍ ನಿಂದ ಆಗಮಿಸಿದ 11 ಜನರಲ್ಲಿ ರೂಪಾಂತರ ವೈರಸ್‍ ಇರುವುದು ಪತ್ತೆಯಾಗಿದೆ ಎಂದು ಪಿಣರಾಯ್ ವಿಜಯನ್ ಅವರು ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

SCROLL FOR NEXT