ದೇಶ

ಬಂಧಿತ ಕೇರಳ ಪತ್ರಕರ್ತ ಕಪ್ಪನ್ ಗೆ ಉತ್ತರ ಪ್ರದೇಶದ ಹೊರಗೆ ಚಿಕಿತ್ಸೆ ಕೊಡಿಸಬಹುದೆ? ಯೋಗಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

Raghavendra Adiga

ನವದೆಹಲಿ: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಆ ರಾಜ್ಯದ ಹೊರಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಬಹುದೆ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ಕೇಳಿದೆ. ಕಪ್ಪನ್ ಅವರನ್ನು ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಸಾವನ್ನಪ್ಪಿದ್ದ ಹತ್ರಾಸ್ ಗೆ ಭೇಟಿ ನೀಡುವ ಮಾರ್ಗದ ಮಧ್ಯೆ ಉತ್ತರ ಪ್ರದೇಶ ಪೋಲೀಸರು ಬಂಧಿಸಿದ್ದರು. 

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠವು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯೂಜೆ) ಮತ್ತು ಕಪ್ಪನ್ ಅವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲಹೆಯ ಮೇರೆಗೆ ರಾಜ್ಯ ಸರ್ಕಾರದಿಂದ ಸೂಚನೆಗಳನ್ನು ಕೇಳಿದೆ.

ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಮೆಹ್ತಾ, ಇದೇ ರೀತಿಯ ಹಲವಾರು ಆರೋಪಿಗಳು ರಾಜ್ಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕಪ್ಪನ್ ಅವರಿಗೆ ವಿಶೇಷ ಚಿಕಿತ್ಸೆ ನೀಡಬಾರದು ಎಂಬ ಸಲಹೆಯನ್ನು ತೀವ್ರವಾಗಿ ವಿರೋಧಿಸಿದರು. ಬಹು ಅಂಗಾಂಗ ವೈಫಲ್ಯದ ಜನರನ್ನು ಮಥುರಾದ ಜೈಲು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎ ಎಸ್ ಬೋಪಣ್ಣ ಅವರನ್ನೂ ಒಳಗೊಂಡ ನ್ಯಾಯಪೀಠ, ಈ ಕ್ಷಣದಲ್ಲಿಕಪ್ಪನ್‌ಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ನೀಡುವ ಸೀಮಿತ ಬೇಡಿಕೆ ಇದ್ದು ಅದಕ್ಕಾಗಿ ಅವರಿಗೆ ದೆಹಲಿಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲು ಅನುಮತಿಸಬಹುದೆ ಎಂದು ಕೇಳಿದೆ.

ಕಳೆದ ವರ್ಷ ನವೆಂಬರ್ 16 ರಂದು ಪತ್ರಕರ್ತನ ಬಂಧನವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಯಾಗಿದ್ದು ಉತ್ತರ ಪ್ರದೇಶ ಸರ್ಕಾರದಿಂದ ಪ್ರತಿಕ್ರಿಯೆ ಕೋರಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಥವಾ ಪಿಎಫ್‌ಐ ಜೊತೆ ಸಂಪರ್ಕ ಹೊಂದಿದ್ದ ನಾಲ್ಕು ಜನರ ವಿರುದ್ಧ ಐಪಿಸಿ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಹತ್ರಾಸ್ ನಲ್ಲಿ 2020 ರ ಸೆಪ್ಟೆಂಬರ್ 14 ರಂದು ಸಾಮೂಹಿಕ ಅತ್ಯಾಚಾರ ನಂತರ ದಲಿತ ಯುವತಿ ಸಾವನ್ನಪ್ಪಿದ್ದು  ಈ ನಂತರ ಕಪ್ಪನ್  ಅವರನ್ನು ಪೋಲೀಸರು ಹತ್ರಾಸ್ ಗೆ ತೆರಳುವ ಮಾರ್ಗದಲ್ಲಿ ಬಂಧಿಸಿದ್ದರು. ಪೋಷಕರ ಒಪ್ಪಿಗೆಯಿಲ್ಲದೆ ಅಧಿಕಾರಿಗಳು ರಾತ್ರೋರಾತ್ರಿ ಯುವತಿಯ ಅಂತ್ಯಕ್ರಿಯೆ ನಡೆಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು,

SCROLL FOR NEXT