ಕೋವಿಡ್-19 ಲಸಿಕೆ ದಾಸ್ತಾನು 
ದೇಶ

18-44 ವಯಸ್ಸಿನವರಿಗೆ ದೆಹಲಿಯಲ್ಲಿ ಲಸಿಕೆ ದಾಸ್ತಾನು ಇಲ್ಲ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್

18-44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ದೆಹಲಿಯಲ್ಲಿ ಲಸಿಕೆ ಲಭ್ಯತೆ ಇಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. 

ನವದೆಹಲಿ: 18-44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ದೆಹಲಿಯಲ್ಲಿ ಲಸಿಕೆ ಲಭ್ಯತೆ ಇಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ಲಸಿಕೆ ಪಡೆಯಲು ಈಗಾಗಲೇ ಉತ್ಪಾದಕರಿಗೆ ಆರ್ಡರ್ ಗಳನ್ನು ಕಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

"ಈ ವಯಸ್ಸಿನ ವಿಭಾಗದವರಿಗೆ ಲಸಿಕೆ ನೀಡುವುದಕ್ಕೆ ಅಗತ್ಯ ತಯಾರಿಯನ್ನು ಮಾಡಿಕೊಳ್ಳಲಾಗಿದೆ. ತಕ್ಷಣಕ್ಕೆ ನಮ್ಮ ಬಳಿ ಲಸಿಕೆಗಳಿಲ್ಲ. ಲಸಿಕೆ ಪೂರೈಕೆ ಮಾಡುವಂತೆ ಕಂಪನಿಗಳಿಗೆ ಮನವಿ ಮಾಡಿದ್ದೇವೆ" ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ದೆಹಲಿ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. 

ದೆಹಲಿಯಲ್ಲಿ 18 ರ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡುವುದಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗಾಗಲೇ ಘೋಷಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!