ಕೋವಿಡ್ ನಿಂದ ಚೇತರಿಕೆ: ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಗುರುವಾರ ಏಮ್ಸ್ ನ ಟ್ರಾಮ ಸೆಂಟರ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.
ನವದೆಹಲಿ: ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಗುರುವಾರ ಏಮ್ಸ್ ನ ಟ್ರಾಮ ಸೆಂಟರ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡರಾಗಿರುವ ಡಾ.ಮನ್ ಮೋಹನ್ ಸಿಂಗ್ ಅವರಿಗೆ ಏಪ್ರಿಲ್ 19 ರಂದು ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿತ್ತು. ತದ ನಂತರ ಅವರು ಏಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ಸುಮಾರು ಹತ್ತು ದಿನಗಳ ಬಳಿಕ ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಕೋವಿಡ್-19 ನೆಗೆಟಿವ್ ವರದಿ ಬಂದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
88 ವರ್ಷದ ಡಾ. ಮನ್ ಮೋಹನ್ ಸಿಂಗ್ ಕೋವಿಡ್-19 ನಿಂದ ಚೇತರಿಕೆಯಾಗಿರುವುದು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸವನ್ನುಂಟುಮಾಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.