ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 3.79 ಲಕ್ಷ ಹೊಸ ಕೇಸ್ ಪತ್ತೆ, 3,645 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಜಕಾಲಿಕ ದಾಖಲೆ ಸೃಷ್ಟಿಸಿದೆ. ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,79,257 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3645 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಜಕಾಲಿಕ ದಾಖಲೆ ಸೃಷ್ಟಿಸಿದೆ. ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,79,257 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3645 ಮಂದಿ ಸಾವನ್ನಪ್ಪಿದ್ದಾರೆ. 

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2 ಲಕ್ಷ ಗಡಿ ದಾಟಿ 2,04,832ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30,84,814ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,69,507 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,50,86,878ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 17,68,190 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,44,71,979 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15,00,20,648 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT