ಕೇದರನಾಥ ದೇಗುಲ (ಸಂಗ್ರಹ ಚಿತ್ರ) 
ದೇಶ

ಕುಂಭಮೇಳ ಎಫೆಕ್ಟ್: ಚಾರ್ ಧಾಮ್ ಯಾತ್ರೆ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ, ಅರ್ಚಕರಿಗೆ ಮಾತ್ರ ಪೂಜೆಗೆ ಅನುಮತಿ

ಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ ಹಾಲಿ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಗೊಳಿಸಿದೆ.

ಡೆಹ್ರಾಡೂನ್: ಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ ಹಾಲಿ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ಉತ್ತರಾಖಂಡ ಸರ್ಕಾರ ಪ್ರಕಟಣೆ ಹೊರಡಿಸಿದ್ದು, 'ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಈ ನಾಲ್ಕು ದೇವಾಲಯಗಳ ಅರ್ಚಕರು ಪೂಜೆಯನ್ನು ನೆರವೇರಿಸಲಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಹೇಳಿದ್ದಾರೆ. 

ಈ ಹಿಂದೆ ಕೋವಿಡ್ ಸಾಂಕ್ರಾಮಿಕದ ಹೊರತಾಗಿಯೂ ಉತ್ತರಾಖಂಡ ಸರ್ಕಾರ ಮಹಾ ಕುಂಭಮೇಳ ಆಯೋಜಿಸಿತ್ತು. ಇಲ್ಲಿ ಕೋವಿಡ್ ನಿರ್ಬಂಧನೆಗಳನ್ನು ಗಾಳಿಗೆ ತೂರಿದ್ದ ಪರಿಣಾಮ ನೂರಾರು ಯಾತ್ರಾರ್ಥಿಗಳು ಸೋಂಕಿಗೆ ತುತ್ತಾಗಿದ್ದರು. ಅಲ್ಲದೆ ಇಬ್ಬರು ಸ್ವಾಮೀಜಿಗಳೂ ಕೂಡ ಸಾವನ್ನಪ್ಪಿದ್ದರು. ಹೀಗಾಗಿ ಈ  ಧಾರ್ಮಿಕ ಕಾರ್ಯಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿ, ಉತ್ತರಾಖಂಡ ಸರ್ಕಾರದ ನಡೆಗೆ ಆಕ್ರೋಶಕ್ಕೆ ತುತ್ತಾಗಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್