ದೇಶ

ಪೆಗಾಸಸ್ ವಿವಾದ: ಆಗಸ್ಟ್ 5 ರಂದು ಸುಪ್ರೀಂಕೋರ್ಟ್ ವಿಚಾರಣೆ

Manjula VN

ನವದೆಹಲಿ: ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್‌.ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. 

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಗುರುವಾರ (ಆ.5) ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. 

ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್ ರಾಮ್ ಮತ್ತು ಶಶಿಕುಮಾರ್, ಕಮ್ಯುನಿಸ್ಟ್ ಮಾರ್ಕ್ಸಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್ ಮತ್ತು ವಕೀಲ ಎಂಎಲ್ ಶರ್ಮಾ ಅವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿಯ ವಿಚಾರವನ್ನು ನಿನ್ನೆ ಹಿರಿಯ ವಕೀಲ ಕಪಿಲ್ ಸಿಬಲ್ ಅವರು. ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠದ ಮುಂದೆ ಮಂಡಿಸಿದ್ದರು.

ನಾಗರಿಕರು, ರಾಜಕಾರಣಿಗಳು, ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಗೂಢಚರ್ಯೆಗೆ ಗುರಿ ಮಾಡಲಾಗಿದೆ. ಈ ವಿಚಾರ ದೇಶ ದಾದ್ಯಂತ, ವಿಶ್ವದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಹೀಗಾಗಿ ಈ ಅರ್ಜಿಯನ್ನು ತಕ್ಷಣವೇ ವಿಚಾರಣೆಗೆ ಎತ್ತಿಕೊಳ್ಳಬೇಕು’ ಎಂದು ಪ್ರತಿಪಾದಿಸಿದ್ದರು.

ಈ ಅರ್ಜಿಯನ್ನು ತುರ್ತು ವಿಚಾರಣೆ ಕೋರಿಕೆ ಪಟ್ಟಿಗೆ ಸೇರಿಸಲು ನ್ಯಾಯಾಲಯದ ಸಿಬ್ಬಂದಿ ಸಿದ್ಧರಿರಲಿಲ್ಲ’ ಎಂದು ಮತ್ತೊಬ್ಬ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪೀಠದ ಮುಂದೆ ಹೇಳಿದರು. ಅರ್ಜಿದಾರರ ಪರ ವಕೀಲರ ಪ್ರತಿಪಾದನೆಯನ್ನು ಆಲಿಸಿದ ಪೀಠವು ಆಗಸ್ಟ್ 5 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ ಎಂದು ತಿಳಿದುಬಂದಿದೆ. 

SCROLL FOR NEXT