ಪಂಜಾಬ್‌ನ ಪಠಾಣ್ಕೋಟ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸೇನಾ ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.
ಚಂಡೀಗಢ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸೇನಾ ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.
ಪಠಾಣ್‌ಕೋಟ್‌ನಿಂದ ವೆಪನ್ ಸಿಸ್ಟಮ್ ಇಂಟಿಗ್ರೇಟೆಡ್ ಹೆಲಿಕಾಪ್ಟರ್ ಬೆಳಗ್ಗೆ 10:20 ಕ್ಕೆ ಟೇಕಾಫ್ ಆಗಿದೆ. ರಂಜಿತ್ ಸಾಗರ್ ಡ್ಯಾಂ ಪ್ರದೇಶದಲ್ಲಿ ಹೆಲಿಕಾಪ್ಟರ್ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿರುವ ಪಠಾಣ್'ಕೋಟ್'ನ ಎಸ್'ಪಿ ಸುರೇಂದ್ರ ಲಂಬಾ ಅವರು, ಸಾಗರ್ ಡ್ಯಾಂ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿರುವ ಕುರಿತು ಮಾಹಿತಿ ಬಂದಿತ್ತು, ಕೂಡಲೇ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವು-ನೋವು ಸಂಭವಿಸಿರುವ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಹೆಲಿಕಾಪ್ಟರ್ ಪತನಗೊಂಡಿರುವ ಡ್ಯಾಂ ಪಂಜಾಬ್‌ನ ಪಠಾಣ್‌ಕೋಟ್‌ನಿಂದ ಸುಮಾರು 30 ಕಿಮೀ ದೂರದಲ್ಲಿದೆ ಎಂದು ತಿಳಿದುಬಂದಿದೆ.
ಈ ವರ್ಷದ ಆರಂಭದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಜಮ್ಮುಕಾಶ್ಮೀರ- ಪಂಜಾಬ್ ಗಡಿಯಲ್ಲಿ ಪತನಗೊಂಡು ಓರ್ವ ಪೈಲಟ್ ಮೃತಪಟ್ಟಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.