ನಿತೀಶ್ ಕುಮಾರ್ 
ದೇಶ

ಪೆಗಾಸಸ್‌ ವಿವಾದ: ಮೌನ ಮುರಿದ ನಿತೀಶ್ ಕುಮಾರ್; ವಿರೋಧ ಪಕ್ಷಗಳನ್ನು ಬೆಂಬಲಿಸಿದ ಬಿಹಾರ ಸಿಎಂ, ತನಿಖೆಗೆ ಆಗ್ರಹ

ರಾಜಕಾರಣಿಗಳು, ಪತ್ರಕರ್ತರು, ನ್ಯಾಯಾಧೀಶರು ಮತ್ತು ಇತರರು ಇಸ್ರೇಲಿ ಸ್ಪೈವೇರ್‌ಗಳ ದಾಳಿಗೆ ಗುರಿಯಾಗಿದ್ದರು ಎನ್ನಲಾದ ಪೆಗಾಸಸ್ ಹಗರಣದ ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿದೆ.

ಪಾಟ್ನಾ: ರಾಜಕಾರಣಿಗಳು, ಪತ್ರಕರ್ತರು, ನ್ಯಾಯಾಧೀಶರು ಮತ್ತು ಇತರರು ಇಸ್ರೇಲಿ ಸ್ಪೈವೇರ್‌ಗಳ ದಾಳಿಗೆ ಗುರಿಯಾಗಿದ್ದರು ಎನ್ನಲಾದ ಪೆಗಾಸಸ್ ಹಗರಣದ ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿದ್ದು, ಇದಕ್ಕೀಗ ಬಿಹಾರ ಮುಖ್ಯಮಂತ್ರಿ ಮತ್ತು ಬಿಜೆಪಿ ಮಿತ್ರ ನಿತೀಶ್ ಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ.

ಪೆಗಾಸಸ್‌ ಕುತಂತ್ರಾಂಶ ಬಳಸಿ ಗೂಢಚರ್ಯೆ ನಡೆಸಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಗೆ ಆಡಳಿತಾರೂಢ ಎನ್‌ಡಿಎಯ ಅಂಗವಾಗಿರುವ ಜೆಡಿಯುನ ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ದನಿಗೂಡಿಸಿದ್ದಾರೆ. 

ದೂರವಾಣಿ ಕದ್ದಾಲಿಕೆಯ ಬಗ್ಗೆ ಬಹಳ ದಿನಗಳಿಂದ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಚರ್ಚೆ (ಸಂಸತ್ತಿನಲ್ಲಿ) ನಡೆಯಲೇಬೇಕು. ಆರಂಭದ ದಿನದಿಂದಲೇ ನಾನು ಇದನ್ನು ಹೇಳುತ್ತಿದ್ದೇನೆ. ಆದರೆ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಸರಕಾರ, ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದೆ. ಆದರೆ ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿಲ್ಲ. ಈ ಬಗ್ಗೆ ತನಿಖೆ  ನಡೆಯಲೇಬೇಕು' ಎಂದು ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಈಗಿನ ದಿನಗಳಲ್ಲಿ ಇಂತಹುದನ್ನು (ಗೂಢಚರ್ಯೆ) ಯಾರು ಬೇಕಿದ್ದರೂ ವಿವಿಧ ರೀತಿಯಲ್ಲಿ ಮಾಡಬಹುದು. ಹಾಗಾಗಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಡೀ ಪ್ರಕರಣದ ಎಲ್ಲ ಆಯಾಮಗಳನ್ನೂ ಪರಿಶೀಲನೆಗೆ ಒಳಪಡಿಸಬೇಕು’ ಎಂದು ನಿತೀಶ್‌ ಹೇಳಿದ್ದಾರೆ. ನಿತೀಶ್ ಹೇಳಿಕೆಯ ಬಗ್ಗೆ ಹಲವಾರು ಪ್ರತಿಕ್ರಿಯೆಗಳು ಬಂದಿವೆ. ಲಾಲು ಪ್ರಸಾದ್‌ ನೇತೃತ್ವದ ಆರ್‌ಜೆಡಿ ಈ ಹೇಳಿಕೆಯನ್ನು ಸ್ವಾಗತಿಸಿದೆ. ನಿತೀಶ್‌ ಅವರು ಈ ಹೇಳಿಕೆಯನ್ನು ಹಿಂದಕ್ಕೆ ಪಡೆಯಲಿಕ್ಕಿಲ್ಲ ಎಂಬ ವಿಶ್ವಾಸವನ್ನು ಪಕ್ಷವು ವ್ಯಕ್ತಪಡಿಸಿದೆ. ‘ಬಿಜೆಪಿಗಿಂತ ಭಿನ್ನವಾದ ಹಲವು ನಿಲುವುಗಳನ್ನು ನಿತೀಶ್‌ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT