ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ಕೋವಿಡ್ ನ 23,676 ಹೊಸ ಪ್ರಕರಣಗಳು,15,626 ಮಂದಿ ಚೇತರಿಕೆ ವರದಿ

ಕೇರಳದಲ್ಲಿ ಮಂಗಳವಾರ ಕೋವಿಡ್ ನ 23,676 ಹೊಸ ಪ್ರಕರಣಗಳು ವರದಿಯಾಗಿದ್ದು, 15,626 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ತಿರುವನಂತಪುರಂ: ಕೇರಳದಲ್ಲಿ ಮಂಗಳವಾರ ಕೋವಿಡ್ ನ 23,676 ಹೊಸ ಪ್ರಕರಣಗಳು ವರದಿಯಾಗಿದ್ದು, 15,626 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕಳೆದ 24 ತಾಸಿನಲ್ಲಿ 1,99,456 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ರಾಜ್ಯದಲ್ಲಿ ಪರೀಕ್ಷೆ ಪಾಸಿಟಿವಿಟಿ ಪ್ರಮಾಣ ಶೇ 11.8ರಷ್ಟಿದೆ. ರಾಜ್ಯದಲ್ಲಿ ಈವರೆಗೆ 2,77,15,059 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕೋವಿಡ್ ಸೋಂಕಿನಿಂದ ಕಳೆದೊಂದು ದಿನದಲ್ಲಿ 148 ಮಂದಿ ಸಾವನ್ನಪ್ಪುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 17,103ಕ್ಕೆ ಏರಿದೆ. ಪಾಸಿಟಿವಿಟಿ ಪ್ರಮಾಣ ಶೇ. 15 ಕ್ಕೂ ಅಧಿಕವಿರುವ 323 ಸ್ಥಳೀಯ ಸ್ವಯಂ ಸರ್ಕಾರಿ ಪ್ರದೇಶಗಳನ್ನು ರಾಜ್ಯದಲ್ಲಿ ಗುರುತಿಸಲಾಗಿದೆ. 

ಬ್ರಿಟನ್ ನಿಂದ ಕೇರಳಕ್ಕೆ ಕಳೆದ 24 ತಾಸಿನಲ್ಲಿ ಆಗಮಿಸಿದ ಯಾವೊಬ್ಬ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿಲ್ಲ. ಇದುವರೆಗೆ ಬ್ರಿಟನ್  ನಿಂದ ರಾಜ್ಯಕ್ಕೆ ಆಗಮಿಸಿದ 11 ಜನರಲ್ಲಿ ಕೋವಿಡ್ ರೂಪಾಂತರಿ ವೈರಸ್ ಪತ್ತೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video