ದೇಶ

2026ರ ನಂತರ ತೆಲಂಗಾಣ, ಆಂಧ್ರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ: ಕೇಂದ್ರ

Lingaraj Badiger

ನವದೆಹಲಿ: 2026ರ ನಂತರವೇ ಸಹೋದರ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆಯನ್ನು ಜಮ್ಮು ಮತ್ತು ಕಾಶ್ಮೀರದೊಂದಿಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಎ ರೇವಂತ್ ರೆಡ್ಡಿಗೆ ಮಾಹಿತಿ ನೀಡಿದರು.

"ಪ್ರತಿ ರಾಜ್ಯದ ವಿಧಾನಸಭೆಯಲ್ಲಿನ ಒಟ್ಟು ಸ್ಥಾನಗಳ ಸಂಖ್ಯೆಯನ್ನು 2026 ರ ನಂತರ ಮೊದಲ ಜನಗಣತಿ ಪ್ರಕಟಿಸಿದ ನಂತರ ಸರಿಪಡಿಸಲಾಗುವುದು" ಎಂದು ರೇವಂತ್ ರೆಡ್ಡಿಗೆ ಸಚಿವರು ಉತ್ತರ ನೀಡಿದರು.

ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರದ ಜೊತೆಯಲ್ಲಿ ತೆಲಂಗಾಣದಲ್ಲಿ ಏಕಕಾಲದಲ್ಲಿ ಕ್ಷೇತ್ರಗಳ ಮರು ವಿಂಗಡಣೆಯನ್ನು ಕೈಗೊಳ್ಳಲು ಯೋಜಿಸುತ್ತಿದೆಯೇ ಎಂದು ತಿಳಿಯಲು ಬಯಸಿದೆ ಎಂದರು.

SCROLL FOR NEXT