ಗೆಹನಾ ವಸಿಷ್ಠ 
ದೇಶ

ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠ ಬಂಧನದಿಂದ ರಕ್ಷಣೆ ನೀಡಲು ಮುಂಬೈ ಕೋರ್ಟ್ ನಕಾರ

ನೀಲಿ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಮುಂಬೈ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅವರು ಪ್ರಮುಖ ಆರೋಪಿಯಾಗಿರುವ ನೀಲಿ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಮುಂಬೈ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

ಬಂಧನ ಭೀತಿಯಿಂದ ನಟಿ ಗೆಹನಾ ಅವರು ನಿರೀಕ್ಷಣಾ ಜಾಮೀನು ಕೋರಿ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಸೋನಾಲಿ ಅಗರ್ವಾಲ್ ಅವರು, ನಟಿಯ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಎಂದಿದ್ದಾರೆ.

ನ್ಯಾಯಾಲಯವು ನಟಿ ಜಾಮೀನು ಅರ್ಜಿಯ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿದೆ. ಆದಾಗ್ಯೂ, ಗೆಹನಾಗೆ ಅಲ್ಲಿಯವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್ ನಿರಾಕರಿಸಿದೆ.

"ಪ್ರಸ್ತುತ ಎಫ್‌ಐಆರ್‌ನಲ್ಲಿನ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದು, ಆರೋಪಿಗಳು ಇತರ ಸಂತ್ರಸ್ಥರನ್ನು ಚುಂಬಿಸುವ ದೃಶ್ಯಗಳು ಮತ್ತು ಲೈಂಗಿಕ ದೃಶ್ಯಗಳನ್ನು ಮಾಡುವಂತೆ ಒತ್ತಾಯಿಸಿದ್ದಾರೆ. ಅಂತಹ ಆರೋಪಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿ, ಮಧ್ಯಂತರ ರಕ್ಷಣೆ ನೀಡಲು ಇದು ಸೂಕ್ತ ಪ್ರಕರಣ ಎಂದು ನನಗೆ ಅನಿಸುವುದಿಲ್ಲ" ಎಂದು ಸೋನಾಲಿ ಅಗರ್ವಾಲ್ ಅವರು ಹೇಳಿದ್ದಾರೆ.

ಮುಂಬೈ ಅಪರಾಧ ವಿಭಾಗವು, ಫೆಬ್ರವರಿ 2021 ರಲ್ಲಿ ನೀಲಿ ಚಲನಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡಿದ ಆರೋಪದ ಮೇಲೆ 

ಕುಂದ್ರಾ ಮತ್ತು ಆತನ ಸಹಚರ ರಯಾನ್ ಥೊರ್ಪೆ ಅವರನ್ನು ಕಳೆದ ತಿಂಗಳು ಬಂಧಿಸಲಾಗೆದ. ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. 

ಪ್ರಕರಣದ ಇನ್ನೊಬ್ಬ ಆರೋಪಿ ರೂಪದರ್ಶಿ ಶೆರ್ಲಿನ್ ಚೋಪ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT