ಸಿಸಿಟಿವಿ ದೃಶ್ಯಾವಳಿಗಳು 
ದೇಶ

ಹಿಟ್ ಅಂಡ್ ರನ್ ನಲ್ಲಿ ನ್ಯಾಯಾಧೀಶರ ಸಾವು ಪ್ರಕರಣ ತನಿಖೆ ಸಿಬಿಐಗೆ!

ಜುಲೈ 28ರಂದು ನಡೆದಿದ್ದ ದನ್ಬಾದ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ ಹಿಟ್ ಅಂಡ್ ರನ್ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. 

ನವದೆಹಲಿ: ಜುಲೈ 28ರಂದು ನಡೆದಿದ್ದ ದನ್ಬಾದ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ ಹಿಟ್ ಅಂಡ್ ರನ್ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. 

ಈ ವಿಷಯದಲ್ಲಿ ಧನ್ಬಾದ್ ಪೊಲೀಸ್ ಎಫ್ಐಆರ್ ಅನ್ನು ಸಿಬಿಐ ವಹಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. 49 ವರ್ಷದ ಧನ್ಬಾದ್ ನ್ಯಾಯಾಧೀಶರ ಹಿಟ್ ಅಂಡ್ ರನ್ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕಳೆದ ಶನಿವಾರ ನಿರ್ಧರಿಸಿದ್ದರು.

ಉತ್ತಮ್ ಆನಂದ್ ಅವರು ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. 

ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಘಟನೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಆಟೋ ಚಾಲಕ ಉದ್ದೇಶಪೂರ್ವಕವಾಗಿ ಉತ್ತಮ್ ಆನಂದ್ ಅವರಿಗೆ ಹಿಂದಿನಿಂದ ಹಾಯಿಸಿದಂತೆ ತೋರಿಸುತ್ತಿದೆ. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video