ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನದಲ್ಲಿ ಭಾರೀ ಮಳೆ: ಮನೆ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ ಐವರ ದುರ್ಮರಣ

ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ  ಐವರು ಸದಸ್ಯರು ಮೃತಪಟ್ಟಿದ್ದು, ಇನ್ನಿಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಟಾ: ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ  ಐವರು ಸದಸ್ಯರು ಮೃತಪಟ್ಟಿದ್ದು, ಇನ್ನಿಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿ ನವಘಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಸಹೋದರರಾದ ಮಹೇಂದ್ರ ಕೈವತ್ ಮತ್ತು ಮಹಾವೀರ್ ಕೈವತ್ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ಹಳೆಯ ಗೋಡೆ ಕುಸಿದಿದೆ ಎಂದು ಬಂಡಿ ಎಸ್ಪಿ ಶಿವರಾಜ್ ಮೀನಾ ತಿಳಿಸಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ, ಕುಟುಂಬದ ಏಳು ಸದಸ್ಯರು ಅವಶೇಷಗಳಡಿ ಸಿಲುಕಿದ್ದು ಇಬ್ಬರನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬುಧವಾರ ಬೆಳಿಗ್ಗೆ ಇತರ ಮೂವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕುಟುಂಬದ ಉಳಿದ ಇಬ್ಬರು ಸದಸ್ಯರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ದಶಕಗಳ ಹಿಂದೆ ಸೂಕ್ತ ಪ್ಲಾನ್ ಮಾಡದೇ ಮನೆ ನಿರ್ಮಿಸಲಾಗಿತ್ತು. ಈ ಕಾರಣದಿಂದಾಗಿಯೇ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!