ಪ್ರಧಾನಿ ಮೋದಿ 
ದೇಶ

ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್‌'ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯ ಕೋರಿದ್ದಾರೆ. 

ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯ ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಆಟದಲ್ಲಿ ಉತ್ತಮ ಹೋರಾಟ ಮಾಡಿದಿರಿ ಲವ್ಲಿನಾ ಬೊರ್ಗೊಹೈನ್‌, ಬಾಕ್ಸಿಂಗ್ ನಲ್ಲಿ ಲವ್ಲಿನಾರ ಯಶಸ್ಸು ಹಲವಾರು ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ. ಆಕೆಯ ದೃಢತೆ ಮತ್ತು ತೆಗೆದುಕೊಳ್ಳುವ ನಿರ್ಣಯಗಳು ಶ್ಲಾಘನೀಯವಾಗಿದೆ. ಟೊಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಗೆದ್ದ ಲವ್ಲಿನಾ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸುತ್ತೇನೆಂದು ಹೇಳಿದ್ದಾರೆ. 

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ಲಭಿಸಿದೆ. ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್‌ ಕಂಚಿನ ಪದಕ ಗೆದ್ದಿದ್ದಾರೆ.

ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್‌ ಕಂಚಿನ ಪದಕ ಗೆದ್ದಿದ್ದಾರೆ. ಬುಧವಾರ ನಡೆದ ಸೆಮಿಫೈನಲ್‌-1 ಪಂದ್ಯದಲ್ಲಿ ಟರ್ಕಿಯ ಬಾಕ್ಸರ್ ಬುಸೆನಾಜ್ ಸರ್ಮೆನೆಲಿ ಎದುರು ಲವ್ಲಿನಾ 0-5ರ ಸೋಲಿನೊಂದಿಗೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ತನ್ನ ಸ್ಪರ್ಧೆ ಮುಗಿಸಿದ್ದಾರೆ. ಆದರೆ ಭಾರತಕ್ಕೆ ಮೂರನೇ ಪದಕದ ಸಂಭ್ರಮ ಸಿಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!