ಅಮರಿಂದರ್ ಸಿಂಗ್ ಮತ್ತು ಪ್ರಶಾಂತ್ ಕಿಶೋರ್ 
ದೇಶ

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜಿನಾಮೆ!

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ.

ಚಂಡಿಗಡ: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ ಎಂದು ಪಂಜಾಬ್ ಸಿಎಂ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಿಮಗೆ ತಿಳಿದಿರುವಂತೆ, ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುವ ನಿರ್ಧಾರದಿಂದ ನಿಮ್ಮ ಪ್ರಧಾನ ಸಲಹೆಗಾರನಾಗಿ ನಾನು ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ,  ನನ್ನ ಮುಂದಿನ ಹೆಜ್ಜೆಯ ಬಗ್ಗೆ ನಾನು ಇನ್ನೂ ತೀರ್ಮಾನಿಸಿದ ಕಾರಣ ಈ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ನಾನು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2022ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾಗಿ ಮಾರ್ಚ್ ತಿಂಗಳಲ್ಲಿ ಸಿಎಂ ಅಮರಿಂದರ್ ಸಿಂಗ್ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT