ದೇಶ

ಮಹಾ ಸರ್ಕಾರದಿಂದ ಪ್ರವಾಹ ಪೀಡಿತ ಮಹಾದ್ ನಲ್ಲಿ 15 ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ

Lingaraj Badiger

ಅಲಿಬಾಗ್: ಇತ್ತೀಚಿನ ಪ್ರವಾಹದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಯಗಢ ಜಿಲ್ಲೆಯ ಮಹದ್ ನಲ್ಲಿ 15 ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಮಹದ್ ತಾಲೂಕಿನ ಸ್ಥಳೀಯರು ಈ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಗೆ ಮಾಡಿಕೊಂಡರು. ಈ ಸಮಯದಲ್ಲಿ 50 ಜನರಿಗೆ ಲೆಪ್ಟೊಸ್ಪೈರೋಸಿಸ್, 169 ಗ್ಯಾಸ್ಟ್ರೋಎಂಟರೈಟಿಸ್ ಮತ್ತು 16 ಕೊರೋನಾ ವೈರಸ್ ಪಾಸಿಟಿವ್ ರೋಗಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿಧಿ ಚೌಧರಿ ತಿಳಿಸಿದ್ದಾರೆ.

ರೋಗಿಗಳು ಮಹಾದ್ ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎರಡು ವಾರಗಳ ಹಿಂದೆ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ನಂತರ ರೋಗಿಗಳ ಮೇಲ್ವಿಚಾರಣೆ ನಡೆಸಲು ರಾಜ್ಯ ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

SCROLL FOR NEXT