ದೇಶ

ಕೋವಿಡ್ ಲಸಿಕೆ: 2.29 ಕೋಟಿ ಡೋಸ್ ಲಸಿಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇದೆ: ಕೇಂದ್ರ ಸರ್ಕಾರ

Srinivasamurthy VN

ನವದೆಹಲಿ:  ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.29 ಕೋಟಿ ಡೋಸ್ ಲಸಿಕೆ  ಬಳಕೆಯಾಗದೇ ಉಳಿದಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ದೇಶದಲ್ಲಿ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮ ಹೊಸ ಮೈಲುಗಲ್ಲಿಗೇರಿದ್ದು, ಈ ವರೆಗೂ ದೇಶಾದ್ಯಂತ 50 ಕೋಟಿ ಡೋಸ್ ದೂ ಅಧಿಕ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ವರೆಗೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 51.66 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದ್ದು, ಈ ಪೈಕಿ 49.74 ಕೋಟಿ ಡೋಸ್ ಲಸಿಕೆಗಳನ್ನು ರಾಜ್ಯ ಸರ್ಕಾರಗಳು ಬಳಕೆ ಮಾಡಿಕೊಂಡಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

SCROLL FOR NEXT