ದೇಶ

ತಕ್ಷಣ ಬಿಡುಗಡೆ ಮಾಡಲು ಕೋರಿ ರಾಜ್ ಕುಂದ್ರಾ ಸಲ್ಲಿಸಿದ್ದ ಅರ್ಜಿ ಬಾಂಬೆ ಹೈಕೋರ್ಟ್ ನಲ್ಲಿ ತಿರಸ್ಕೃತ!

Manjula VN

ಮುಂಬೈ: ರಾಜ್ ಕುಂದ್ರಾ ತಮ್ಮ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. 

ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಕೂಡಲೇ ಬಿಡುಗಡೆ ಮಾಡುವಂತೆ ಕೋರಿ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಮೇಲ್ಮನವಿಯನ್ನು ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ರಾಜ್ ಕುಂದ್ರಾ ಹಾಗೂ ರಿಯಾನ್ ಥಾರ್ಪೆ ಅವರ ಮೇಲ್ಮನವಿಯನ್ನು ತಿರಸ್ಕರಿಸಿದೆ. 

ನ್ಯಾಯಾಲಯ ಅರ್ಜಿ ತಿರಸ್ಕರಿಸುವ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಬಂಧನ ಮುಂದುವರೆಯಲಿದೆ ಎಂದು ತಿಳಿದುಬಂದಿದೆ. 

ಜುಲೈ 27ರಂದು ಮುಂಬೈನ ನ್ಯಾಯಾಲಯವೊಂದು ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು. ಈ ಕುರಿತು ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದ ರಾಜ್​ ಕುಂದ್ರಾ ಮತ್ತು ರಿಯಾನ್ ಥಾರ್ಪೆ, ಬಂಧನದ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎಂದು ಹೇಳಿ, ಬಿಡುಗಡೆಗೊಳಿಸುವಂತೆ ಕೋರಿದ್ದರು. ಆದರೆ ಇದನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, ಬಂಧನದ ಪ್ರಕ್ರಿಯೆಯಲ್ಲಿ ಯಾವುದೇ ದೋಷವಿಲ್ಲ. ಮತ್ತು ಸೆಷನ್ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದೂ ಸರಿಯಾಗಿದೆ ಎಂದು ಇಂದು ತೀರ್ಪು ನೀಡಿದೆ.

ನೀಲಿಚಿತ್ರ ತಯಾರಿಕೆ ಮತ್ತು ಹಂಚಿಕೆ ಪ್ರಕರಣದಲ್ಲಿ ಇದುವರೆಗೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ. ನಿನ್ನೆಯಷ್ಟೇ (ಆಗಸ್ಟ್ 6) ಶೆರ್ಲಿನ್ ಚೋಪ್ರಾ ಅವರು ಪೊಲೀಸರ ಮುಂದೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ.

SCROLL FOR NEXT