ಕೇರಳದಲ್ಲಿ ಕೊರೋನಾ ಪರೀಕ್ಷೆ ಮಾಡುತ್ತಿರುವ ಆರೋಗ್ಯ ಕಾರ್ಯಕರ್ತರು 
ದೇಶ

ಕೇರಳದಲ್ಲಿ ಕೊರೋನಾದಿಂದ ಇಂದು 93 ಸಾವು, 18,607 ಹೊಸ ಪ್ರಕರಣ ಪತ್ತೆ

ಕೇರಳದಲ್ಲಿ ಭಾನುವಾರ ಹೊಸದಾಗಿ  18,607 ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 93 ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 17,747ಕ್ಕೆ ಏರಿಕೆಯಾಗಿದೆ ಎಂದು ಕೇರಳ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ತಿರುವನಂತಪುರಂ: ಕೇರಳದಲ್ಲಿ ಭಾನುವಾರ ಹೊಸದಾಗಿ  18,607 ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 93 ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 17,747ಕ್ಕೆ ಏರಿಕೆಯಾಗಿದೆ ಎಂದು ಕೇರಳ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 20, 108 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖವಾದರ ಸಂಖ್ಯೆ 33,57,687 ಆಗಿದೆ. ರಾಜ್ಯದಲ್ಲಿ ಸದ್ಯ 1,76,572 ಸಕ್ರಿಯ ಪ್ರಕರಣಗಳು ಇರುವುದಾಗಿ ತಿಳಿಸಿದೆ.

ಕೇರಳ ಸರ್ಕಾರ ಇತ್ತೀಚಿಗೆ ತನ್ನ ಕೋವಿಡ್-19 ನಿಯಾಮಾವಳಿಗಳನ್ನು ಪರಿಷ್ಕರಿಸಿದ್ದು, ವೀಕೆಂಡ್ ಲಾಕ್ ಡೌನ್ ಸರಳಗೊಳಿಸಿದೆ. ಆಗಸ್ಟ್ 11 ರಿಂದ ವಾರದಲ್ಲಿ ಆರು ದಿನಗಳ ಕಾಲ ಅಂಗಡಿ, ಮುಗ್ಗಟ್ಟುಗಳು ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ. 

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದು, ಸೂಕ್ಷ್ಮ ಕಂಟೈನ್ ಮೆಂಟ್ ವಲಯಗಳಲ್ಲಿ ಕೇವಲ ಅವಶ್ಯಕ ಸರಕುಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್