ಪಿ ಚಿದಂಬರಂ 
ದೇಶ

ಗೋವಾ ಚುನಾವಣಾ ವೀಕ್ಷಕರಾಗಿ ಪಿ ಚಿದಂಬರಂ ನೇಮಿಸಿದ ಕಾಂಗ್ರೆಸ್

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರನ್ನು ಹಿರಿಯ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದೆ. 

ಪಣಜಿ: ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರನ್ನು ಹಿರಿಯ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದೆ. 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಭಾನುವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಚಿದಂಬರಂ ಅವರು "ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯತಂತ್ರಗಳು ಮತ್ತು ಸಮನ್ವಯವನ್ನು ನೋಡಿಕೊಳ್ಳುತ್ತಾರೆ" ಎಂದು ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.


40 ಸದಸ್ಯರ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. 2017ರ ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಕರಾವಳಿ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿ ಕೆಲವು ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರರೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ