ದೇಶ

ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Nagaraja AB

ನವದೆಹಲಿ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಮತ್ತು ಆಕೆಯ ಕುಟುಂಬದ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದಪೋಲಿ ತಹಸಿಲ್ ಅಧ್ಯಕ್ಷ ಮಂಕರಂದ್ ಮಡ್ಲೇಕರ್ ಅವರು ವಕೀಲರಾದ ಪಂಕಜ್ ಸಿಂಗ್ ಮತ್ತು ವಕೀಲ ಗೌತಮ್ ಅವರ ಮೂಲಕ ಈ ಅರ್ಜಿ ಸಲ್ಲಿಸಿದ್ದಾರೆ. 

ರಾಹುಲ್ ಗಾಂಧಿ ಅವರು ದೆಹಲಿ ಕ್ಯಾಂಟ್ ಪ್ರದೇಶದಲ್ಲಿ 9 ವರ್ಷದ ಸಂತ್ರಸ್ತ ಕುಟುಂಬವನ್ನು ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಕುಟುಂಬದ ಸೂಕ್ಷ್ಮ ವಿವರಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ್ದರು ಮತ್ತು  ಛಾಯಾಚಿತ್ರಗಳನ್ನು ಪ್ರಕಟಿಸಿದ್ದರು.

SCROLL FOR NEXT